ನವದೆಹಲಿ:ಇತ್ತೀಚೆಗೆ ದೇಶದಲ್ಲಿ ಹೃದಯಾಘಾತ ಹಲವರ ಎದೆಯಲ್ಲಿ ನಡುಕವನ್ನು ಹುಟ್ಟಿಸುವ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಸಣ್ಣಪ್ರಾಯದವರೂ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸಾಯುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿವೆ.
ಜಗತ್ತಿನಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಒಟ್ಟು ಸಾವುಗಳ ಪೈಕಿ ಐದನೇ ಒಂದರಷ್ಟು ಅಂದರೆ 17.9 ಶತಲಕ್ಷ ಸಾವುಗಳು ಭಾರತದಲ್ಲೇ ಆಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ-ಅಂಶ ಹೊರಹಾಕಿದೆ. ಇದು ಆತಂಕಕಾರಿ ಸಂಗತಿ ಆಗಿದೆ.
ದೇಶದಲ್ಲಿ ವಯಸ್ಸಿನ ಭೇದವಿಲ್ಲದೆ ಅದರಲ್ಲೂ ಚಿಕ್ಕವಯಸ್ಸಿನವರೂ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಇಂಡಿಯನ್ ಹಾರ್ಟ್ ಅಸೋಸಿಯೇಷನ್​ (ಐಎಚ್​ಎ) ಪ್ರಕಟಿಸಿರುವ ಅಂಕಿ-ಅಂಶದಲ್ಲಿಯೂ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.
ಐಎಚ್​ಎ ಮಾಹಿತಿ ಪ್ರಕಾರ ದೇಶದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾಯುತ್ತಿರುವ ಪುರುಷರ ಪೈಕಿ ಶೇ. 50 ಮಂದಿ ಐವತ್ತು ವರ್ಷಗಳಿಗಿಂತ ಒಳಗಿನವರು ಹಾಗೂ ಶೇ. 25 ಮಂದಿ 40 ವರ್ಷಕ್ಕಿಂತ ಒಳಗಿನವರು. ಆದರೆ ಮಹಿಳೆಯರ ಕುರಿತ ಈ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ ಎನ್ನಲಾಗಿದೆ. –ಏಜೆನ್ಸೀಸ್
ಇಲ್ಲಿನ ಶಿಕ್ಷಕರು ಉದ್ಯೋಗಕ್ಕೆ ಸೇರುವ ಮುನ್ನ ಈ ಕೆಲಸ ಮಾಡಲೇಬೇಕು: ಏನಿದು ಲ್ಯಾಬ್​ ಸ್ಕೂಲ್?

ಸದ್ಯ ಈ ಬಿಯರ್ ಕುಡಿಯಬೇಡಿ!; ಸೆಡಿಮೆಂಟ್ ಶೇಖರಣೆ ಆಗಿರುವುದರಿಂದ ತಡೆ ಹಿಡಿದ ಅಬಕಾರಿ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − one =
Remember me
