ತಿರುವನಂತಪುರಂ:ಕೇರಳದ ಚರ್ಚ್​ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ತೀವ್ರ ಸುಟ್ಟ ಗಾಯಗಳಿಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಮಸ್ಸೆರಿಯ ಮೋಲಿ ಜಾಯ್ ಎಂದು ಗುರುತಿಸಲಾಗಿದ್ದು, ಸೋಮವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ರಾಜ್ಯೋತ್ಸವ ರಸಪ್ರಶ್ನೆ – 5: ಫಲಿತಾಂಶ
ಅಕ್ಟೋಬರ್ 29 ರಂದು ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮೋಲಿ ಜಾಯ್ ಶೇ.70ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವೆಂಟಿಲೇಟರ್​ನಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ದುರಂತಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ಶರಣಾಗಿದ್ದು, ಉಗ್ರರ ಕೈವಾಡವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 9 =
Remember me
