ವಯನಾಡು:ದೇವರ ನಾಡು ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ಸದ್ಯ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. 100ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಘಟನೆ ಸಂಬಂಧ ಕೇರಳ ಸರ್ಕಾರ ರಾಜ್ಯಾದ್ಯಂತ ಇಂದು (ಜುಲೈ 30) ಮತ್ತು ನಾಳೆ (ಜುಲೈ 31) ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದೆ. ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ತಂಡ ಸೇರಿದಂತೆ ಎಲ್ಲ ರಕ್ಷಣಾ ಏಜೆನ್ಸಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಇದನ್ನೂ ಓದಿ:ಟಾಲಿವುಡ್​ನಲ್ಲಿ ಶುರುವಾಯ್ತು ಗುರು-ಶಿಷ್ಯರ ಜಟಾಪಟಿ; ಅನ್​ಫಾಲೋ ಮಾಡಿದ ನಟಿ, ನಿರ್ದೇಶಕ ಟಾಂಗ್
ಭೂಕುಸಿತ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಹಾಗೂ ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ನಾಳೆ ವಯನಾಡಿಗೆ ಭೇಟಿ ನೀಡಲಿದ್ದು, ಸಂತ್ರಸ್ತರ ಕುಟುಂಗಳನ್ನು ಭೇಟಿಯಾಗಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ಸಂಬಂಧ ರಾಕಹುಲ್​ ಈಗಾಗಲೇ ಕೇರಳ ಸಿಎಂ ಪಿಣರಾಯಿ ವಿಜಯನ್​ ಹಾಗೂ ವಯನಾಡು ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಯನಾಡು ಹಾಗೂ ರಾಯ್​ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್​ ಗಾಂಧಿ, ರಾಯ್​ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸಲು ನಿರ್ಧರಿಸಿದರು. ಹೀಗಾಗಿ, ವಯನಾಡ್ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − thirteen =
Remember me
