ಲಖನೌ:ಉತ್ತರಪ್ರದೇಶದ ಹತ್ರಾಸ್​ನ ಸಿಕಂದರಾವು ಪ್ರದೇಶದ ಫುಲ್ರೈ ಗ್ರಾಮದಲ್ಲಿ ನಡೆಯುತ್ತಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಉಂಟಾದ ಭೀಕರ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 120ಕ್ಕೆ ಏರಿಕೆಯಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸಿಕಂದರಾವು ಪ್ರದೇಶದ ಫುಲ್ರೈ ಗ್ರಾಮದಲ್ಲಿ ಭೋಲೆ ಬಾಬಾ ತಮ್ಮ ಅನುಯಾಯಿಗಳನ್ನು ಉದ್ಧೇಶಿಸಿ ಮಾತನಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಹೆಚ್ಚಿನ ಜನರು ಸೇರಿದ್ದೆ ಅವಘಡಕ್ಕೆ ಮುಖ್ಯ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಧಾರ್ಮಿಕ ಕಾರ್ಯಕ್ರಮ ಮುಗಿದಾಗ ಎಲ್ಲರೂ ಹೊರಗೆ ಹೋಗುವ ಅವಸರದಲ್ಲಿ ಕಾಲ್ತುಳಿತ  ಸಂಭವಿಸಿದೆ. ಸ್ಥಳದಲ್ಲಿ ಅಪಾರ ಸಂಖ್ಯೆಯ ಅನುಯಾಯಿಗಳು ಜಮಾಯಿಸಿದ್ದರು. ಈ ವೇಲೆ ನೂಕುನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತವಾಗಿದೆ. ಘಟನೆಗೆ ನಿಖರ ಕಾರಣ ಏನು ಎಂಬುದನ್ನು ತನಿಖೆ ನಡೆಸಲಾಗುತ್ತಿದ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
उत्तर प्रदेश के हाथरस जिले में हुई दुर्घटना में महिलाओं और बच्चों सहित अनेक श्रद्धालुओं की मृत्यु का समाचार हृदय विदारक है। मैं अपने परिवारजनों को खोने वाले लोगों के प्रति गहन शोक संवेदना व्यक्त करती हूं तथा घायल हुए लोगों के शीघ्र स्वस्थ होने की कामना करती हूं।
ಇದನ್ನೂ ಓದಿ:ವಿಶ್ವಕಪ್​ ಗೆದ್ದಾಗ ಭಾರತದ ಆಟಗಾರರು ಭಾವುಕರಾಗಿದ್ದು ದೊಡ್ಡ ಡ್ರಾಮಾ ಎಂದ ಪಾಕ್​ ಪತ್ರಕರ್ತ; ವಿಡಿಯೋ ವೈರಲ್​
ವಿಚಾರ ತಿಳಿದು ಸಂತಾಪ ಸೂಚಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಹತ್ರಾಸ್​ ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯಲ್ಲಿ ಸಂಭವಿಸಿದ ದುರಂತದಲ್ಲಿ  ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅನೇಕ ಭಕ್ತರು ಸಾವಿಗೀಡಾದ ಸುದ್ದಿ ಹೃದಯ ವಿದ್ರಾವಕವಾಗಿದೆ, ಕುಟುಂಬವನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅವರ ಕುಟುಂಬ ಸದಸ್ಯರು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಹತ್ರಾಸ್​ನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರಿಗೆ ತಲಾ 2 ಲಕ್ಷ ರೂ., ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿದ ವಿಚಾರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರೊಂದಿಗೆ ಮಾತನಾಡಲಾಯಿತು. ಸರ್ಕಾರವು ಸಂತ್ರಸ್ತರಿಗೆ ನೆರವು ನೀಡಲು ಸಿದ್ದವಿದ್ದು, ಮೃತಪಟ್ಟವರ ಕುಟುಂಬಕ್ಕೆ ನೋವನ್ನು ತುಂಬುವ ಶಕ್ತಿ ಆ ದೇವರು ನೀಡಲಿ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − four =
Remember me
