ನವದೆಹಲಿ: ಕರೊನಾ ವೈರಸ್​ ತೀವ್ರ ಹರಡುವಿಕೆಯಿಂದ ಭೀತಿಗೊಂಡಿರುವ ನಾಗರಿಕರ ಪರವಾಗಿ ಕೇಂದ್ರ ಸರ್ಕಾರ ಧಾವಿಸಿದ್ದು, ಎಟಿಎಂ ಕೇಂದ್ರಗಳಲ್ಲಿ ಡೆಬಿಟ್​ ಕಾರ್ಡ್​ ಬಳಸಿ ಹಣ ಡ್ರಾ ಮಾಡುವುದಕ್ಕೆ ವಿಧಿಸುತ್ತಿದ್ದ ಶುಲ್ಕವನ್ನು ಹಿಂದಕ್ಕೆ ಪಡೆದಿದೆ.
ಖಾತೆ ಹೊಂದಿರುವ ಬ್ಯಾಂಕ್​ ಹೊರತಾಗಿ ಇತರೆ ಬ್ಯಾಂಕ್​ಗಳ ಎಟಿಎಂನಲ್ಲಿ ಹಣ ಡ್ರಾ ಮಾಡಿದರೆ ಶುಲ್ಕ ಪಾವತಿ ಮಾಡಬೇಕಾಗಿತ್ತು. ಆದರೆ ಕರೊನಾ ವೈರಸ್​ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಶುಲ್ಕ ವಿಧಿಸುವುದನ್ನು ನಿಲ್ಲಿಸಿದೆ.
ಗ್ರಾಹಕರು ಯಾವುದೇ ಡೆಬಿಟ್​ ಕಾರ್ಡ್​ ಬಳಸಿ ಯಾವುದೇ ಎಟಿಎಂನಲ್ಲಿ ಶುಲ್ಕ ಇಲ್ಲದೆ ಹಣ ಪಾವತಿ ಮಾಡಬಹುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವೈರಸ್​ ಸೋಂಕು ಹರಡುವುದನ್ನು ತಪ್ಪಿಸಲು ಎಲ್ಲ ಚಟುವಟಿಕೆಗಳಿಗೆ ದಿಗ್ಬಂಧನ ವಿಧಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹಣ ಪಡೆಯಲು ತೊಂದರೆ ಎದುರಾಗಬಾರದು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.(ಏಜೆನ್ಸೀಸ್​)
ಕರೊನಾ ವೈರಸ್​ ಸೋಂಕು ತಡೆ ಸಂಪೂರ್ಣ ಜವಾಬ್ದಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್​ಗೆ ವಹಿಸಿದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 17 =
Remember me
