ಫರೀದ್‌ಕೋಟ್:ಸೆಕ್ಯುರಿಟಿ ಗಾರ್ಡ್‌ಗಳು ರೋಗಿಯ ಸಂಬಂಧಿಕರ ಮೇಲೆ ಹಲ್ಲೆ ಮಾಡಿರುವ ಘಟನೆ ಪಂಜಾಬ್​ನ ಫರೀದ್​ಕೋಟ್​ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ:ಸಮಾಲೋಚನೆ ವೇಳೆ ಡಾಕ್ಟರ್​​ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ: ಮುಂದೆ ನಡೆದದ್ದು..
ಗುರು ಗೋಬಿಂದ್ ಸಿಂಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಈ ಘಟನೆ ನಡೆದಿದ್ದು, ಈ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸೋಮವಾರ ಮಧ್ಯಾಹ್ನ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಮಾರಾಮಾರಿ ನಡೆದಿದ್ದು, ಆಸ್ಪತ್ರೆಯ ಸೆಕ್ಯುರಿಟಿ ಗಾರ್ಡ್‌ಗಳು ರೋಗಿಯೊಬ್ಬರ ಸಂಬಂಧಿಕರಿಬ್ಬರ ಮೇಲೆ ತಳ್ಳುವುದು, ಕಪಾಳಮೋಕ್ಷ ಮಾಡುವುದು ಮತ್ತು ಗುದ್ದಾಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
#WATCH| Faridkot Punjab: Patient’s relative allegedly manhandled by security guards in the emergency department of Guru Gobind Singh medical college & Hospital.
(Video confirmed by Hospital Administration)pic.twitter.com/oPagzhWLvi
— ANI (@ANI)July 25, 2023
ಈ ಬಗ್ಗೆ ವೈದ್ಯಕೀಯ ಅಧೀಕ್ಷಕ ಆಸ್ಪತ್ರೆಯಲ್ಲಿ ಘಟನೆ ನಡೆದಿರುವುದನ್ನು ಖಚಿತಪಡಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಹಿಳಾ ರೋಗಿ ಆಸ್ಪತ್ರೆಗೆ ದಾಖಲಾಗಿದ್ದು ಆಕೆ ತೀರಿಕೊಂಡಿದ್ದಳು. ಮೃತ ರೋಗಿಯ ಸಂಬಂಧಿಕರು ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಕೋಪಗೊಂಡು ವೈದ್ಯರೊಂದಿಗೆ ವಾಗ್ವಾದ ನಡೆಸಿದರು. ಆಗ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಜಗಳವನ್ನು ನಿಲ್ಲಿಸಿದರು ಎಂದು ಹೇಳಿದ್ದಾರೆ. ಏತನ್ಮಧ್ಯೆ, ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸ್ ಅಧಿಕಾರಿಗಳು ಕೂಲಂಕುಷವಾಗಿ ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − three =
Remember me
