ನವದೆಹಲಿ:ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಭಾರತಕ್ಕೆ ವಿಶ್ವದಾದ್ಯಂತ ಪ್ರಶಂಸೆಗಳು ವ್ಯಕ್ತವಾಗುತ್ತಿದ್ದು, ಚಂದ್ರಯಾನದ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿಜ್ಞಾನಿಗಳ ಅವಿರತ ಶ್ರಮದಿಂದಾಗಿ ಭಾರತದ ಪ್ರತಿಷ್ಠೆಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದಾರೆ.
ಚಂದ್ರಯಾನ ಯಶಸ್ಸಿನ ಬೆನ್ನಲ್ಲೇ ಪ್ರಧಾನಿ ಮೋದಿಗೆ ಅಭಿನಂದಿಸಿರುವ ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್​ ಹೊಸ ಹೇಳಿಕೆಯೊಂದನ್ನು ನೀಡುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಚಂದ್ರನ ಮೇಲೆ ಹಕ್ಕು ಸಾಧಿಸುವವರು ತುಂಬಾ ಜನ ಇದ್ದಾರೆ. ಧರ್ಮಗುರುಗಳು ಮತ್ತು ಬೇರೆ ದೇಶಗಳು ಚಂದ್ರನ ಮೇಲೆ ತಮ್ಮ ಹಕ್ಕು ಸಾಧಿಸುವ ಮೊದಲು ಅದನ್ನು ಹಿಂದೂ ಸನಾತನ ರಾಷ್ಟ್ರವನ್ನಾಗಿ ಘೋಷಿಸಿ. ಈ ವಿಚಾರವಾಗಿ ಸಂಸತ್ತಿನಲ್ಲಿ ನಿರ್ಣಯವನ್ನು ಅಂಗೀಕರಿಸಬೇಕು ಎಂದು ಆಗ್ರಹಿಸಿದ್ದಾರೆ.
संसद से चांद को हिंदू सनातन राष्ट्र के रूप में घोषित किया जाए,चंद्रयान 3 के उतरने के स्थान "शिव शक्ति पॉइंट" को उसकी राजधानी के रूप में विकसित हो ,ताकि कोई आतंकी जिहादी मानसिकता का वहा न पहुंच पाए 🌸🙏🌸स्वामी चक्रपाणि महाराज, राष्ट्रीय अध्यक्ष, अखिल भारत हिंदू महासभा/ संत महासभाpic.twitter.com/HPbifYFZzX
ಇದನ್ನೂ ಓದಿ:ಪ್ರಧಾನಿ ಮೋದಿ ಅವರ ಮನ್​ ಕಿ ಬಾತ್​ನಲ್ಲಿ ಪ್ರಸ್ತಾಪಿಸಿದ ಬೆಂಗಳೂರು ಮೂಲದ ಧನ್​ಪಾಲ್​ ಯಾರು?
ಚಂದ್ರಯಾನ-3 ಲ್ಯಾಂಡಿಂಗ್​ ಪ್ರದೇಶಕ್ಕೆ ಶಿವಶಕ್ತಿ ಎಂದು ಹೆಸರಿಸಿದ್ದಕ್ಕೆ ಪ್ರಧಾನಿ ಮೋದಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಲ್ಯಾಂಡಿಂಗ್​ ಪ್ರದೇಶವನ್ನು ರಾಜಧಾನಿಯನ್ನಾಗಿ ಅಭಿವೃದ್ದಿ ಮಾಡಬೇಕು. ಜಿಹಾದಿ ಮನಸ್ಥಿತಿಯೊಂದಿಗೆ ಯಾವುದೇ ಉಗ್ರಗಾಮಿ ಅಲ್ಲಿಗೆ ಬಾರದ ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಸ್ವಾಮಿ ಚಕ್ರಪಾಣಿ ಮಹಾರಾಜ್​ ಈ ಹಿಂದೆಯೂ ಸಹ ಇದೇ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದರು. ಕೋವಿಡ್​ ಮೊದಲ ಅಲೆ ಸಂದರ್ಭದಲ್ಲಿ ಗೋಮೂತ್ರ ಪಾರ್ಟಿ ಹಾಗೂ 2018ರಲ್ಲಿ ಕೇರಳದಲ್ಲಿ ಸಂಭವಿಸಿದ ಪ್ರವಾಹದ ಸಂದರ್ಭದಲ್ಲಿ ಯಾರು ನೆರವು ನೀಡಬಾರದು ಎಂದು ಹೇಳುವ ಮೂಲಕ ಸುದ್ದಿಯಾಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eight =
Remember me
