ಕಳೆದ ಹಣಕಾಸು ವರ್ಷದಲ್ಲಿ ಭಾರತದ ಚಿನ್ನದ ಆಮದು ಪ್ರಮಾಣ ಸುಮಾರು ಶೇ. 30 ಕಡಿಮೆಯಾಗಿದೆ. ವಾಣಿಜ್ಯ ಸಚಿವಾಲಯ ಈ ಅಂಕಿ-ಅಂಶ ನೀಡಿದೆ. ಹೆಚ್ಚಿನ ಸೀಮಾ ಸುಂಕ ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಯ ಕಾರಣ ಚಿನ್ನದ ಆಮದು ಇಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಭಾರತ ಒಟ್ಟಾರೆ 31.8 ಬಿಲಿಯನ್ ಡಾಲರ್ ಮೌಲ್ಯದ ಚಿನ್ನ ಆಮದು ಮಾಡಿಕೊಂಡಿದೆ.
ಚಿನ್ನದ ಮೇಲಿನ ಹೆಚ್ಚಿನ ಆಮದು ಸುಂಕ ವಿಧಿಸಲಾಗಿದೆ. ಜತೆಗೆ ಜಾಗತಿಕ ಆರ್ಥಿಕ ಅನಿಶ್ಚಿತತೆಗಳು ಆಮದು ಕುಸಿತಕ್ಕೆ ಕಾರಣವಾಗಿವೆ. ಭಾರತ ವಾರ್ಷಿಕ 800-900 ಟನ್ ಚಿನ್ನ ಆಮದು ಮಾಡಿಕೊಳ್ಳುತ್ತದೆ. ಕಳೆದ ಹಣಕಾಸು ವರ್ಷದಲ್ಲಿ ಚಿನ್ನ, ಆಭರಣಗಳ ರಫ್ತು ಶೇ 0.3 ಕುಸಿದು 35.2 ಶತಕೋಟಿ ಡಾಲರ್​ಗೆ ತಲುಪಿದೆ. ಚಾಲ್ತಿ ಖಾತೆ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ವರ್ಷ ಚಿನ್ನದ ಮೇಲಿನ ಆಮದು ಸುಂಕವನ್ನು ಶೇ.10.75ರಿಂದ ಶೇ.15ಕ್ಕೆ ಹೆಚ್ಚಿಸಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + eight =
Remember me
