ನವದೆಹಲಿ:ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ವಿಧಾನಸಭೆ ಮತ್ತು 3 ಲೋಕಸಭಾ ಕ್ಷೇತ್ರಗಳ ಉಪಚುನಾ ವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಮತದಾನ ನಡೆದಿತ್ತು. ಅಸ್ಸಾಂ ಮತ್ತು ಮಧ್ಯ ಪ್ರದೇಶಗಳಲ್ಲಿ ಬಿಜೆಪಿ ಬಲ ವೃದ್ಧಿಯಾಗಿದೆ. ಹಿಮಾಚಲ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸಂಪೂರ್ಣ ಮೇಲುಗೈ ಸಾಧಿಸಿದೆ. ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಈ ಹಿಂದೆ ಚುನಾವಣೆ ನಡೆದಾಗ ಎರಡರಲ್ಲಿ ಬಿಜೆಪಿ ಗೆಲುವು ಕಂಡಿತ್ತು.
ವಿರೋಧಿ ರಾಜಕೀಯದ ಮುಖವಾಣಿಯಾಗಿ ಮಮತಾ ಬ್ಯಾನರ್ಜಿ ರಾಷ್ಟ್ರ ರಾಜಕಾರಣದ ಕಡೆಗೆ ಮುಖ ಮಾಡಿದ್ದಾರೆ. ವಿಧಾನಸಭೆ ಚುನಾವಣೆ ಮತ್ತು ಈ ಉಪಚುನಾವಣೆಗಳಲ್ಲಿ ಸಿಕ್ಕ ಅಭೂತಪೂರ್ವ ಗೆಲುವಿನ ಕಾರಣ ಮುಂದಿನ ಲೋಕಸಭೆ ಚುನಾ ವಣೆಯಲ್ಲಿ ಪ್ರಬಲ ಪ್ರತಿಸ್ಪರ್ಧೆ ನೀಡುವ ಲೆಕ್ಕಾಚಾರ ನಡೆಸಿದ್ದಾರೆ. ಅಸ್ಸಾಂನಲ್ಲಿ ಬಿಜೆಪಿ ಆಳ್ವಿಕೆ ಇದ್ದು ಹಿಮಂತ ಬಿಸ್ವಾ ಶರ್ವಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಆಡಳಿತಕ್ಕೂ ಜನಮನ್ನಣೆ ಸಿಕ್ಕಿದೆ. ತೆಲಂಗಾಣದ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯ ಉಳಿಸಿಕೊಂಡಿದೆ. ಹಿಮಾಚಲದಲ್ಲಿ ಆಡಳಿತಾರೂಢ ಬಿಜೆಪಿಗೆ ಮುಖಭಂಗವಾಗಿದೆ. ಒಂದು ಲೋಕಸಭೆ ಮತ್ತು ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕೂಡ ಬಿಜೆಪಿ ಸೋಲು ಕಂಡಿದೆ. ಜುಬ್ಬಲ್ ಕೊಟಖಾಯ್ ಕ್ಷೇತ್ರದಲ್ಲಿ ಠೇವಣಿಯನ್ನೇ ಕಳೆದುಕೊಂಡು ಬಿಜೆಪಿ ಮುಖಭಂಗ ಅನುಭವಿಸಿದೆ. ಜೈರಾಮ್ ಠಾಕೂರ್ ನೇತೃತ್ವದ ಸರ್ಕಾರದ ಮಟ್ಟಿಗೆ ಇದು ಭಾರಿ ಹಿನ್ನಡೆಯಾಗಿದೆ. ಮುಂದಿನ ವರ್ಷ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಭಾರಿ ರಾಜಕೀಯ ಬದಲಾವಣೆಯ ಮುನ್ಸೂಚನೆ ಕಂಡುಬಂದಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಭಿನ್ನಮತ ಇದ್ದರೂ ಅದರ ಪ್ರಯೋಜನ ಪಡೆಯುವುದು ಬಿಜೆಪಿಗೆ ಸಾಧ್ಯವಾಗಿಲ್ಲ. ಮಾಜಿ ಸಿಎಂ ವಸುಂಧರಾ ರಾಜೇ ಅವರ ಪ್ರಯತ್ನವೂ ಫಲಿಸಿಲ್ಲ. ಇಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತಿರುವುದಷ್ಟೇ ಅಲ್ಲ, ಮೂರು ಮತ್ತು ನಾಲ್ಕನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಕೇಂದ್ರಾಡಳಿತ ಪ್ರದೇಶ ದಾದ್ರ ಮತ್ತು ನಗರ್ ಹವೇಲಿ ಲೋಕಸಭಾ ಕ್ಷೇತ್ರವನ್ನು ಶಿವಸೇನೆ ಗೆದ್ದುಕೊಂಡಿದೆ. ಮಹಾರಾಷ್ಟ್ರದ ಹೊರಗಿನಿಂದ ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದೆ. ಇಲ್ಲಿ ಶಿವಸೇನೆಯ ಕಲಾಬೆನ್ ದೇಲ್ಕರ್ ಬಿಜೆಪಿ ಮಹೇಶ್ ಗವಿತ್ ವಿರುದ್ಧ 51 ಸಾವಿರ ಮತಕ್ಕೂ ಹೆಚ್ಚಿನ ಅಂತರದಿಂದ ವಿಜಯಿಯಾಗಿದ್ದಾರೆ. ಪಕ್ಷೇತರರಾಗಿ ಆಯ್ಕೆ ಆಗಿದ್ದ ಕಲಾಬೆನ್ ಪತಿ ಮೋಹನ್ ದೇಲ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಉಪಚುನಾವಣೆ ನಡೆಯಿತು. ಮಧ್ಯಪ್ರದೇಶದ ಖಾಂಡ್ವಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಜ್ಞಾನೇಶ್ವರ ಪಾಟೀಲ್ ಕಾಂಗ್ರೆಸ್​ನ ಮಾಜಿ ಶಾಸಕ ರಾಜನಾರಾಯಣ ಸಿಂಗ್ ಪೂರ್ಣಿ ವಿರುದ್ಧ 82 ಸಾವಿರಕ್ಕೂ ಅಧಿಕ ಮತದಿಂದ ಗೆದ್ದಿದ್ದಾರೆ. ಬಿಜೆಪಿಯಿಂದ ಚುನಾಯಿತರಾಗಿದ್ದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ ಕಾರಣ ಇಲ್ಲಿ ಚುನಾವಣೆ ನಡೆಯಿತು. ಈ ಕ್ಷೇತ್ರವನ್ನು ಅವರು 1996ರಿಂದ 2019ರವರೆಗೆ ನಡೆದ ಆರು ಚುನಾವಣೆ ಯಲ್ಲಿ ಪ್ರತಿನಿಧಿಸಿದ್ದರು. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರವನ್ನು ಬಿಜೆಪಿಯಿಂದ ಕಾಂಗ್ರೆಸ್ ಕಿತ್ತುಕೊಂಡಿದೆ. ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ಜಯಗಳಿಸಿದ್ದಾರೆ. ಬಿಜೆಪಿಯ ಕುಶಾಲ್ ಠಾಕೂರ್ ಅವರನ್ನು 7 ಸಾವಿರ ಮತಗಳಿಂದ ಪರಾಭವಗೊಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
