ನವದೆಹಲಿ:ಮ್ಯಾನ್​ ವರ್ಸಸ್​ ವೈಲ್ಡ್​ ಕಾರ್ಯಕ್ರಮದ ಬಗ್ಗೆ ನಿಮಗೆಲ್ಲ ಗೊತ್ತಿರತ್ತೆ. ಕಳೆದ ವರ್ಷ ಮೋದಿ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಮೇಲಂತೂ ಈ ಕಾರ್ಯಕ್ರಮದ ದಿಕ್ಕೇ ಬದಲಾಗಿಬಿಟ್ಟಿದೆ. ದೇಶ ವಿದೇಶಗಳಲ್ಲಿ ಫೇಮಸ್​​ ಆಗಿರುವ ಈ ಕಾರ್ಯಕ್ರಮದಲ್ಲಿ ಈಗಾಗಲೇ ಪ್ರಧಾನಿ ಮೋದಿ, ಸೂಪರ್​ ಸ್ಟಾರ್​ ರಜನಿಕಾಂತ್​, ಅಕ್ಷಯ್​ ಕುಮಾರ್​ ಕಾಣಿಸಿಕೊಂಡಿದ್ದು, ಬಾಲಿವುಡ್​ನ ಬ್ಯೂಟಿ ದೀಪಿಕಾ ಪಡುಕೋಣೆ ಹಾಗೂ ಕ್ರಿಕೆಟ್​ ಮಾಂತ್ರಿಕ ವಿರಾಟ್​ ಕೊಹ್ಲಿ ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ.
2019ರ ಆಗಸ್ಟ್​ನಲ್ಲಿ ಪ್ರಧಾನಿ ಮೋದಿ, ಕಾರ್ಯಕ್ರಮದ ನಿರೂಪಕ ಬೇರ್​ ಗ್ರಿಲ್ಸ್​ ಜತೆ ಕಾಡು ಸುತ್ತಿದ್ದ ಮ್ಯಾನ್​ ವರ್ಸಸ್​ ವೈಲ್ಡ್​ ಕಾರ್ಯಕ್ರಮ ಜನಮನ್ನಣೆ ಪಡೆದಿತ್ತು. ಡಿಸ್ಕವರಿ ಚಾನೆಲ್​ನಲ್ಲಿ ಪ್ರಸಾರವಾದ ಕಾರ್ಯಕ್ರಮ ಆ ವಾರದ ಟಾಪ್​ ಸ್ಥಾನದಲ್ಲಿ ಕಾಣಿಸಿಕೊಂಡಿತ್ತು. ಬರೋಬ್ಬರಿ 3.02 ಮಿಲಿಯನ್​ ವೀಕ್ಷಣೆ ಪಡೆದುಕೊಂಡಿತ್ತು. ಈ ದಾಖಲೆಯನ್ನು ಕಂಡ ಡಿಸ್ಕವರಿ ಚಾನೆಲ್​, ಮೋದಿಯಂತೆ ಭಾರತದಲ್ಲಿ ಪ್ರಸಿದ್ಧತೆ ಪಡೆದುಕೊಂಡಿರುವ ವ್ಯಕ್ತಿಗಳ ಜತೆ ಕಾಡು ಸುತ್ತಿ ಕಾರ್ಯಕ್ರಮ ನಡೆಸುವ ತೀರ್ಮಾನ ತೆಗೆದುಕೊಂಡಿತ್ತು. ಅದರಂತೆ ಸೂಪರ್​ ಸ್ಟಾರ್​ ರಜನಿಕಾಂತ್​ ಜತೆ ಕಾರ್ಯಕ್ರಮದ ಚಿತ್ರೀಕರಣ ಮಾಡಲಾಗಿದೆ. ಮೈಸೂರಿನ ಅನೇಕ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಕೆಲ ಕಾರಣಗಳಿಂದ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ.
ಬಾಲಿವುಡ್​ನ ನಟ ಅಕ್ಷಯ್​ ಕುಮಾರ್​ ಕೂಡ ಗ್ರಿಲ್ಸ್​ ಜತೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಂಡೀಪುರ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಅಕ್ಷಯ್​ ಜತೆ ಚಿತ್ರೀಕರಣವನ್ನು ನಡೆಯಲಿದ್ದು, ಈಗಾಗಲೇ ಎರಡು ಸ್ಥಳಗಳಲ್ಲಿ ಮೂರು ಗಂಟೆಯ ಚಿತ್ರೀಕರಣವನ್ನು ಮುಗಿಸಲಾಗಿದೆ.
ಈ ಇಬ್ಬರು ಸ್ಟಾರ್​ಗಳ ನಂತರ ಬಾಲಿವುಡ್​ ನಟಿ ದೀಪಿಕಾ ಪಡುಕೋಣೆ ಮತ್ತು ಭಾರತೀಯ ಕ್ರಿಕೆಟ್​ ಟೀಮ್​ನ ನಾಯಕ ವಿರಾಟ್​ ಕೊಹ್ಲಿ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿಯೊಂದು ಇದೀಗ ಹರಿದಾಡುತ್ತಿದೆ. ಈ ಸುದ್ದಿಯನ್ನು ದಿ ನ್ಯೂ ಇಂಡಿಯನ್​ ಎಕ್ಸ್​ಪ್ರೆಸ್​ ವರದಿ ಮಾಡಿದೆ. ಈಗಾಗಲೇ ಮೋದಿಯ ಮ್ಯಾನ್​ ವರ್ಸಸ್​ ವೈಲ್ಡ್​ ದಾಖಲೆ ಬರೆದಿದೆ. ಭಾರತದ ಅತ್ಯಂತ ಫೇಮಸ್​ ಸೆಲೆಬ್ರಿಟಿ ಎನಿಸಿಕೊಂಡಿರುವ ಕೊಹ್ಲಿ ಈ ದಾಖಲೆಯನ್ನು ಮುರಿಯುತ್ತಾರಾ ಎನ್ನುವುದನ್ನು ಕಾದು ನೋಡಬೇಕು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 9 =
Remember me
