ನವದೆಹಲಿ:ಸ್ವಾಮಿ ಗೋವಿಂದಾನಂದ ಸರಸ್ವತಿ ವಿರುದ್ಧ ಸ್ವಾಮಿ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ದೆಹಲಿ ಹೈಕೋರ್ಟ್ ಮಂಗಳವಾರ(ಆಗಸ್ಟ್​​ 13) ನೋಟಿಸ್ ಜಾರಿ ಮಾಡಿದೆ.
ಇದನ್ನು ಓದಿ:ಜಾವೆಲಿನ್​ ಕುರಿತು ಸೈನಾ ಹೇಳಿಕೆ ವೈರಲ್​; ಕಂಗನಾ ರಣಾವತ್ ಆಫ್​ ಇಂಡಿಯನ್​ ಸ್ಪೋರ್ಟ್ಸ್​ ಎಂದು ಕಿಡಿಕಾರಿದ ನೆಟ್ಟಿಗರು
ನ್ಯಾಯಮೂರ್ತಿ ನವೀನ್ ಚಾವ್ಲಾ ನೇತೃತ್ವದ ಪೀಠವು, ಸಂತರು ಮಾನನಷ್ಟದ ಬಗ್ಗೆ ಚಿಂತಿಸಬಾರದು. ಕಾನೂನು ಹೋರಾಟಕ್ಕಿಂತ ಕಾರ್ಯಗಳ ಮೂಲಕ ಗೌರವ ಮತ್ತು ಖ್ಯಾತಿಯನ್ನು ಸಾಧಿಸಬೇಕು ಎಂದು ಸಲಹೆ ನೀಡಿದರು. ಅಂತಹ ವಿವಾದಗಳಿಂದ ಸಂತರ ನಿಜವಾದ ಖ್ಯಾತಿಗೆ ಧಕ್ಕೆಯಾಗುವುದಿಲ್ಲ, ಅಂದರೆ ಮಾನನಷ್ಟಕ್ಕೆ ಕಾನೂನು ಪರಿಹಾರವನ್ನು ಹುಡುಕುವುದಕ್ಕಿಂತ ಹೆಚ್ಚಾಗಿ ಸಂತರು ನಡವಳಿಕೆ ಮತ್ತು ಪಾತ್ರದ ಮೇಲೆ ಕೇಂದ್ರೀಕರಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಸ್ವಾಮಿ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಸೋಮವಾರ ಸ್ವಾಮಿ ಗೋವಿಂದಾನಂದ ಸರಸ್ವತಿ ವಿರುದ್ಧ ಸಿವಿಲ್ ಮಾನನಷ್ಟ ಮೊಕದ್ದಮೆ ಹೂಡಿದರು. ಸ್ವಾಮಿ ಗೋವಿಂದಾನಂದ ಸರಸ್ವತಿ, ತಮ್ಮನ್ನು ನಕಲಿ ಬಾಬಾ ಮತ್ತು ಕಾಂಗ್ರೆಸ್ ಪಕ್ಷದ ರಾಜಕೀಯ ಬೆಂಬಲವನ್ನು ಹೊಂದಿದ್ದಾರೆ ಎಂದು ಹೇಳಿರುವುದನ್ನು ವಿರೋಧಿಸಿ ಈ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಎಎನ್​ಐ ವರದಿ ಮಾಡಿದೆ.
ಸ್ವಾಮಿ ಗೋವಿಂದಾನಂದ ಅವರು ಜುಲೈ 21ರಂದು ಪತ್ರಿಕಾಗೋಷ್ಠಿ ನಡೆಸಿ ಇತ್ತೀಚಿನ ದಿನಗಳಲ್ಲಿ ಮುಕ್ತೇಶ್ವರಾನಂದ ಎಂಬ ನಕಲಿ ಬಾಬಾ ಜನಪ್ರಿಯವಾಗುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಪಾದಗಳನ್ನು ಮುಟ್ಟಿದ್ದಾರೆ ಮತ್ತು ಅಂಬಾನಿಯಂತಹ ದೊಡ್ಡ ಉದ್ಯಮಿ ಅವರನ್ನು ಅವರ ಮನೆಗೆ ಸ್ವಾಗತಿಸಿದ್ದಾರೆ. ಅವರನ್ನು ಕಾಂಗ್ರೆಸ್​ ಪಕ್ಷವು ಬೆಂಬಲಿಸಿದೆ. ವಾರಣಾಸಿ ನ್ಯಾಯಾಲಯದಿಂದ ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದ್ದು ಅವರು ತಲೆಮರೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.
ವಿಚಾರಣೆಯ ಕೊನೆಯಲ್ಲಿ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಿತು. ಮುಂದಿನ ವಿಚಾರಣೆಯನ್ನು ಆಗಸ್ಟ್ 29ಕ್ಕೆ ನಿಗದಿಪಡಿಸಿತು. ವಿಚಾರಣೆಯ ಈ ಹಂತದಲ್ಲಿ ನ್ಯಾಯಾಲಯವು ಯಾವುದೇ ಆದೇಶವನ್ನು ನೀಡಲಿಲ್ಲ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 17 =
Remember me
