ಲಖನೌ:ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ(ಜುಲೈ 26) ಉತ್ತರ ಪ್ರದೇಶದ ಸುಲ್ತಾನ್‌ಪುರದ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಇದನ್ನು ಓದಿ:ಜಗನ್​​ರ​ನ್ನು ಡ್ರಗ್ ಲಾರ್ಡ್ ಪಾಬ್ಲೋ ಎಸ್ಕೋಬಾರ್ ಹೋಲಿಸಿದ ಸಿಎಂ; ಹೇಳಿದ್ದೇನು ಗೊತ್ತಾ?
2018ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಪ್ರಸ್ತುತ ಗೃಹ ಸಚಿವ ಅಮಿತ್ ಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದರು. ಈ ಅವಹೇಳನಕಾರಿ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇನ್ನು ಈ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದರ ಹೇಳಿಕೆ ದಾಖಲಾಗಬೇಕಿದೆ.
ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸುವ ಪ್ರಕ್ರಿಯೆಯನ್ನು ಡಿಸೆಂಬರ್‌ 2023ರಲ್ಲಿ ನ್ಯಾಯಾಲಯ ಆರಂಭಿಸಿತ್ತು. ನಂತರ ಫೆಬ್ರವರಿ 20ರಂದು ಅವರು ನ್ಯಾಯಾಲಯಕ್ಕೆ ಶರಣಾಗಿದ್ದರು. ಇದಾದ ಬಳಿಕ ನ್ಯಾಯಾಲಯ ಅವರಿಗೆ ತಲಾ 25 ಸಾವಿರ ರೂಪಾಯಿಗಳ ಎರಡು ಬಾಂಡ್‌ಗಳ ಮೇಲೆ ಜಾಮೀನು ಮಂಜೂರು ಮಾಡಿದೆ.
ರಾಹುಲ್​ ಗಾಂಧಿ ತಮ್ಮ ಹೇಳಿಕೆಯನ್ನು ದಾಖಲಿಸಲು ವಿಶೇಷ ಮ್ಯಾಜಿಸ್ಟ್ರೇಟ್ ಶುಭಂ ವರ್ಮಾ ಅವರು ಸಮನ್ಸ್ ನೀಡಿದ್ದು, ಅವರು ಸತತ 12 ವಿಚಾರಣೆಗಳನ್ನು ತಪ್ಪಿಸಿದ್ದಾರೆ. ಈ ಬಾರಿಯೂ ವಿಚಾರಣೆ ತಪ್ಪಿಸಿದರೆ ರಾಹುಲ್​ ಗಾಂಧಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹಿಂದಿನ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಅವರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಅವರು ಜುಲೈ 2ರಂದು ಅವರು ಗೈರುಹಾಜರಾಗಲು ವಿರೋಧ ಪಕ್ಷದ ನಾಯಕರಾಗಿ ಸಂಸದೀಯ ಕರ್ತವ್ಯಗಳ ಕಾರಣ ಎಂದು ನ್ಯಾಯಾಲಯಕ್ಕೆ ವಿವರಿಸಿದರು.
ಕರ್ನಾಟಕ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಬಿಜೆಪಿ ಪಕ್ಷವು ಪ್ರಾಮಾಣಿಕ ಮತ್ತು ಶುದ್ಧ ರಾಜಕೀಯದಲ್ಲಿ ನಂಬಿಕೆಯನ್ನು ಹೊಂದಿದೆ ಎಂದು ಹೇಳಿಕೊಂಡಿದೆ. ಆದರೆ ಹತ್ಯೆ ಪ್ರಕರಣದಲ್ಲಿ ‘ಆರೋಪಿ’ಯಾಗಿರುವವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಹೊಂದಿದೆ ಎಂದು ಟೀಕಿಸಿದ್ದರು. ಆಗ ಬಿಜೆಪಿ ಮುಖ್ಯಸ್ಥರಾಗಿದ್ದ ಅಮಿತ್​ ಷಾ ಅವರನ್ನು ಉಲ್ಲೇಖಿಸಿ ರಾಹುಲ್​ ಗಾಂಧಿ ಇದನ್ನು ಹೇಳಿದ್ದರು. ರಾಹುಲ್​​​ ಗಾಂಧಿಯವರ ಹೇಳಿಕೆಗಳು ಅಮಿತ್ ಷಾ ಅವರ ಪ್ರತಿಷ್ಠೆಗೆ ಧಕ್ಕೆ ತರುತ್ತಿವೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ಮುಖಂಡ ಮತ್ತು ಜಿಲ್ಲಾ ಸಹಕಾರಿ ಅಧ್ಯಕ್ಷ ವಿಜಯ್ ಮಿಶ್ರಾ ಅವರು 2018 ಆಗಸ್ಟ್ 4ರಂದು ಪ್ರಕರಣ ದಾಖಲಿಸಿದ್ದಾರೆ. (ಏಜೆನ್ಸೀಸ್​​)
ಶಾಹೆನ್‌ಶಾ ಪರಿಕಲ್ಪನೆ… ರಾಷ್ಟ್ರಪತಿ ಭವನದ ನಡೆಗೆ ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 1 =
Remember me
