ನವದೆಹಲಿ:ಅಗ್ನಿಪಥ ಯೋಜನೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಕುರಿತು ರಕ್ಷಣಾ ಸಚಿವ ರಾಜನಾಥ್​ ಸಿಂಗ್​​ ಇಂದು ಮಹತ್ವದ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದು, ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಕುರಿತು ರಕ್ಷಣಾ ಸಚಿವರು ಮಾಹಿತಿ ಪಡೆಯಲಿದ್ದಾರೆ. ಈ ನಡುವೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸಭೆಯಲ್ಲಿ ಸೂಚನೆ ನೀಡುವ ಸಾಧ್ಯತೆ ಇದೆ.
ದೇಶದ ಎಂಟು ರಾಜ್ಯಗಳಲ್ಲಿ ತೀವ್ರ ವಿರೋಧ ಎದುರಾಗಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಬಿಹಾರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪೈಕಿ ಓರ್ವ ಮೃತಪಟ್ಟಿದ್ದಾನೆ.
ತೆಲಂಗಾಣದಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿಗೆ 24 ವರ್ಷದ ಯುವಕ ಮೃತಪಟ್ಟಿದ್ದು, ಮೃತ ಯುವಕನ ಕುಟುಂಬಕ್ಕೆ ಮುಖ್ಯಮಂತ್ರಿ ಕೆ ಚಂದ್ರಶೇಖರ್​ ರಾವ್​​ 25 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಆತನ ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ಕೆಲಸ ಕೊಡುವುದಾಗಿ ಭರವಸೆ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಈವರೆಗೆ 250 ಮಂದಿಯನ್ನು ಬಂಧಿಸಲಾಗಿದ್ದು, ಬಸ್​, ರೈಲುಗಳಿಗೆ ಬೆಂಕಿ ಹಚ್ಚಿದ ಇನ್ನೂ ಕೆಲವರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.(ಏಜೆನ್ಸೀಸ್​)
ಅಗ್ನಿಪಥ ಯೋಜನೆಗೆ ತೀವ್ರ ವಿರೋಧದ ಬೆನ್ನಲ್ಲೇ ಮೀಸಲಾತಿ ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + twenty =
Remember me
