ನವದೆಹಲಿ: ಅಂತಿಮ ವರ್ಷದ ಪದವಿ ಪರೀಕ್ಷೆಯನ್ನು ರದ್ದು ಮಾಡುವುದಕ್ಕೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ) ಸರ್ಕಾರಕ್ಕೆ ಸಲಹೆ ನೀಡಿದೆ. ಕರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿರುವ ಈ ಸಮಯದಲ್ಲಿ ಪರೀಕ್ಷೆ ನಡೆಸದೆಯೇ ಹಿಂದಿನ ಸೆಮಿಸ್ಟರ್​ಗಳ ಫಲಿತಾಂಶದ ಆಧಾರದ ಮೇಲೆ ತೇರ್ಗಡೆಗೊಳಿಸಲು ಯುಜಿಸಿಯ ಸಮಿತಿಯೊಂದು ಶಿಫಾರಸು ಮಾಡಿದೆ.
ಹಿಂದಿನ ಸೆಮಿಸ್ಟರ್​ಗಳ ಫಲಿತಾಂಶದ ಆಧಾರದ ಮೇಲೆ ನೀಡುವ ಫಲಿತಾಂಶವು ವಿದ್ಯಾರ್ಥಿಗಳಿಗೆ ತೃಪ್ತಿದಾಯಕವಾಗಿಲ್ಲದಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಕರೊನಾ ಸಮಸ್ಯೆ ಮುಗಿದ ನಂತರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಸಲಹೆಯಲ್ಲಿ ತಿಳಿಸಲಾಗಿದೆ. ಹರಿಯಾಣ ವಿವಿ ಉಪಪ್ರಾಂಶುಪಾಲರಾದ ಆರ್.ಸಿ. ಕುಹಾದ್ ನೇತೃತ್ವದ ಸಲಹಾ ಸಮಿತಿ ಈ ಸಲಹೆ ನೀಡಿದೆ. ಐಐಟಿಯಂತಹ ಪ್ರತಿಷ್ಠಿತ ವಿದ್ಯಾಲಯಗಳು ಆನ್​ಲೈನ್​ನಲ್ಲೇ ತರಗತಿಯನ್ನು ಮುಂದುವರಿಸುವುದಾಗಿ ತಿಳಿಸಿವೆ.
ಇದನ್ನೂ ಓದಿ:ಕೋವಿಡ್ ನೆಪದಲ್ಲಿ ಸೈಬರ್ ದಾಳಿ; ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ, ಉಚಿತ ಪರೀಕ್ಷೆ ನೆಪದಲ್ಲಿ ಮೋಸ
ಹೀಗೆ ಮಾಡಿದ್ರೆ ಕರೊನಾ ಹರಡೋದು ಗ್ಯಾರೆಂಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
