ನವದೆಹಲಿ:ಕರೊನಾ ಸೋಂಕು ಹರಡದಂತೆ ತಡೆಯಲು ಜಾರಿಗೊಳಿಸಲಾಗಿದ್ದ ಲಾಕ್​ಡೌನ್​ ಅನ್ನು ತೆರವುಗೊಳಿಸುವಲ್ಲಿ ಕೇಂದ್ರ ಸರ್ಕಾರ ತರಾತುರಿ ತೋರಿದೆ. ಕೇವಲ ತನ್ನ ಆರ್ಥಿಕ ಲಾಭವನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಇದರಿಂದ ಸೋಂಕು ತೀವ್ರಗತಿಯಲ್ಲಿ ಹರಡುವ ಜತೆಗೆ, ದೇಶದ ಜನರ ಪ್ರಾಣವನ್ನೂ ಅಪಾಯ ಬಂದೊದಗಿದೆ. ಆದ್ದರಿಂದ, ಅನ್​ಲಾಕ್​ 1.0 ಅನ್ನು ತಕ್ಷಣವೇ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿ 5ನೇ ವರ್ಷದ ಕಾನೂನು ವಿದ್ಯಾರ್ಥಿ ಅರ್ಜುನ್​ ಅಗರ್​ವಾಲ್​ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್​ ತಿರಸ್ಕರಿಸಿದೆ.
ಜತೆಗೆ, ಪ್ರಚಾರದ ಹುಚ್ಚಿನಿಂದಾಗಿ ಇಂಥ ಅರ್ಜಿಯನ್ನು ದಾಖಲಿಸಲಾಗಿದೆ. ಆದ್ದರಿಂದ, ಇನ್ನೊಮ್ಮೆ ಈ ರೀತಿ ಮಾಡದಂತೆ ಅವರಿಗೆ ಎಚ್ಚರಿಕೆ ನೀಡುವ ಜತೆಗೆ ನ್ಯಾಯಪೀಠ, 20 ಸಾವಿರ ರೂಪಾಯಿ ದಂಡ ವಿಧಿಸಿದೆ.
ಅನ್​ಲಾಕ್​ 1.0ದಲ್ಲಿ ಕೇಂದ್ರ ಸರ್ಕಾರ ಪ್ರತಿಪಾದಿಸಿರುವ ಮಾರ್ಗಸೂಚಿಯನ್ನು ಪ್ರಶ್ನಿಸಿದ್ದ ಅವರು, ನಿರ್ಬಂಧಿತ ಚಟುವಟಿಕೆಗಳ ಮರುಆರಂಭಕ್ಕೆ ಅನುಮತಿ ನೀಡುವ ಅದರ ಕ್ರಮ ನ್ಯಾಯಸಮ್ಮತವಲ್ಲ ಎಂದು ಅರ್ಜುನ್​ ಅಗರ್​ವಾಲ್​ ತಮ್ಮ ಅರ್ಜಿಯಲ್ಲಿ ವಾದಿಸಿದ್ದರು.ಇದರ ವಿಚಾರಣೆ ನಡೆಸಿದ ನ್ಯಾಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸುಬ್ರಮೊಣಿಯಂ ಪ್ರಸಾದ್​ ಅವರಿದ್ದ ನ್ಯಾಯಪೀಠ, ಅರ್ಜುನ್​ ಅಗರ್​ವಾಲ್​ ಅವರ ಅರ್ಜಿ ಸಂಪೂರ್ಣ ತಪ್ಪುಮಾಹಿತಿಗಳಿಂದ ಕೂಡಿದೆ. ಕೇವಲ ಪ್ರಚಾರ ಪಡೆಯುವ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ:ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿತು ಮತ್ತೊಂದು ತಬ್ಲಿಘಿ ಸಮಾವೇಶ
ಕೇಂದ್ರ ಸರ್ಕಾರ ಮಾರ್ಚ್​ನಿಂದ ಇದುವರೆಗೆ ಕೋವಿಡ್​-19 ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರಣಿ ಆದೇಶಗಳನ್ನು ಹೊರಡಿಸಿದೆ. ನಿರ್ಬಂಧಗಳು ಜಾರಿಯಲ್ಲಿದ್ದ ಸಂದರ್ಭದಲ್ಲಿ ಜನರಿಗೆ ಹೆಚ್ಚಿನ ಕಷ್ಟವಾಗದಂತೆ ಕ್ರಮ ಕೈಗೊಂಡಿದೆ. ಕಾಲಕಾಲಕ್ಕೆ ಅದು ಆರ್ಥಿಕ ಉತ್ತೇನ ಪ್ಯಾಕೇಜ್​ಗಳನ್ನು ಘೋಷಿಸುವ ಮೂಲಕ ಜನರ ಆರ್ಥಿಕ ಸಂಕಷ್ಟಕ್ಕೆ ಸ್ಪಂದಿಸಿದೆ ಎಂದು ನ್ಯಾಯಪೀಠ ಮೆಚ್ಚುಗೆ ವ್ಯಕ್ತಪಡಿಸಿದೆ.ವಿಶ್ವಾದ್ಯಂತ ನಿರ್ಬಂಧಗಳನ್ನು ಸಡಿಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೋವಿಡ್​-19 ಹರಡುವಿಕೆಯನ್ನು ತಡೆಯುವ ಜತೆಗೆ ನಿರ್ದಿಷ್ಟ ವರ್ಗದ ಜನರು ಉಪವಾಸದಿಂದ ಬಳಲದಂತೆ ನೋಡಿಕೊಳ್ಳಲು ಸರ್ಕಾರ ಕಾಲಕಾಲಕ್ಕೆ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದೆ.
ಲಾಕ್​ಡೌನ್​ ಅನ್ನು ಹಂತಹಂತವಾಗಿ ಸಡಿಲಗೊಳಿಸಲಾಗುತ್ತಿದೆ. ಇದನ್ನು ಗಮನಿಸಿದಾಗ ಲಾಕ್​ಡೌನ್​ ತೆರವುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತರಾತುರಿ ತೋರಿದೆ ಎನಿಸುತ್ತಿಲ್ಲ. ಸರ್ಕಾರ ದೇಶದಲ್ಲಿನ ಕೋವಿಡ್​-19 ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ. ಕರೊನಾ ಸೋಂಕು ಹರಡುವಿಕೆ ವ್ಯಾಪಕವಾಗುತ್ತಿದೆ ಎಂದು ಅನಿಸಿದಾಗ ಪರಿಸ್ಥಿತಿಗೆ ಅನುಗುಣವಾಗಿ ಮತ್ತೊಮ್ಮೆ ಲಾಕ್​ಡೌನ್​ ಜಾರಿಗೊಳಿಸಲು ಅದು ಸಿದ್ಧವಿದೆ ಎಂದು ಅಭಿಪ್ರಾಯಪಟ್ಟಿದೆ.
ಕರೊನಾ ಬಗ್ಗೆ ಎಚ್ಚರಿಸಿ ಸರ್ಕಾರದ ಶಿಕ್ಷೆಗೆ ಗುರಿಯಾಗಿ ಮೃತಪಟ್ಟ ವೈದ್ಯನ ಪತ್ನಿಗೆ ಮಗು ಜನನ: ಭಾವುಕ ಮಾತು​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + six =
Remember me
