ನವದೆಹಲಿ:ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 8ರಂದು ನಡೆಯಲಿದ್ದು, ಫೆ.11ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸುನಿಲ್​ ಆರೋರಾ ತಿಳಿಸಿದ್ದಾರೆ.
ಜನವರಿ 14ರಂದು ಚುನಾವಣೆ ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಸಲು ಜನವರಿ 21 ಕೊನೇ ದಿನ. ನಾಮಪತ್ರ ಹಿಂಪಡೆಯಲು 22 ಕೊನೇ ದಿನವಾಗಿದ್ದು, ಫೆಬ್ರವರಿ 24 ಉಮೇದುವಾರಿಕೆ ಹಿಂಪಡೆಯಲು ಕೊನೇ ದಿನವಾಗಿದೆ ಎಂದು ಆರೋರಾ ಮಾಹಿತಿ ನೀಡಿದರು.
70 ಸದಸ್ಯರ ಬಲವುಳ್ಳ ವಿಧಾನಸಭೆಯ ಫೆಬ್ರವರಿ 22ರಂದು ಕೊನೆಗೊಳ್ಳಲಿದೆ. ಫೆ.22ರೊಳಗೆ ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ.
2105ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಆಮ್​ ಆದ್ಮಿ (ಆಪ್​) ಪಕ್ಷ ಅಧಿಕಾರಕ್ಕೆ ಬಂದಿತ್ತು. ಅರವಿಂದ ಕ್ರೇಜಿವಾಲ್​ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆಗ ಆಪ್​ 67 ಸ್ಥಾನ ಪಡೆದಿದ್ದರೆ, ಉಳಿದ 3 ಸ್ಥಾನಗಳು ಬಿಜೆಪಿ ಪಾಲಾಗಿದ್ದವು. ಕಾಂಗ್ರೆಸ್​ ಶೂನ್ಯ ಸ್ಥಾನಕ್ಕೆ ಇಳಿದಿತ್ತು.
ಮುಖ್ಯಾಂಶಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + six =
Remember me
