ಇಂದೋರ್​ :ದೆಹಲಿಯಿಂದ ಹೊರಟು ಬೆಂಗಳೂರಿಗೆ ಬರ್ತಾ ಇದ್ದ ಇಂಡಿಗೋ ವಿಮಾನ ಇಂದೋರ್​ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಗುವಿನ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟ ಕಾರಣ, ಪೈಲಟ್​ ಈ ನಿರ್ಧಾರ ತೆಗೆದುಕೊಂಡಿದ್ದರು.
ಇಂದೋರ್​ನ ಏರ್​ಪೋರ್ಟ್ ನಿರ್ದೇಶಕ ಆರ್ಯಾಮಾ ಸನ್ಯಾಲ್ ಸುದ್ದಿಮಾಧ್ಯಮಗಳಿಗೆ ತಿಳಿಸಿರುವ ಮಾಹಿತಿ ಪ್ರಕಾರ, ಬುಧವಾರ ಸಂಜೆ 5.35ಕ್ಕೆ ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ 6ಇ 2248 ಇಂಡಿಗೋ ವಿಮಾನದಲ್ಲಿ ವೈದ್ಯಕೀಯ ತುರ್ತು ಇದೆ. ಇಳಿಯೋದಕ್ಕೆ ಅವಕಾಶ ಮಾಡಿಕೊಡಿ ಎಂಬ ಸಂದೇಶ ಬಂತು. ಸಂಜೆ 5.55ಕ್ಕೆ ವಿಮಾನ ಇಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಆ್ಯಂಬುಲೆನ್ಸ್ ಅನ್ನು ಸಿದ್ಧಪಡಿಸಿಡಲಾಗಿತ್ತು. ಗೋರಖಪುರದ ದುರ್ಗೇಶ್ ಜೈಸ್ವಾಲ್​ ಮತ್ತು ಅನು ಜೈಸ್ವಾಲ್​ ದಂಪತಿ ತಮ್ಮ ಮಗು ದೇವ್ ಜೈಸ್ವಾಲ್​ನನ್ನು ಆಸ್ಪತ್ರೆಗೆ ದಾಖಲಿಸಲು ಓಡೋಡಿ ಬಂದರು. ಅರೆವೈದ್ಯಕೀಯ ಸಿಬ್ಬಂದಿಯ ನೆರವಿನೊಂದಿಗೆ ಅವರನ್ನು ಸಮೀಪದ ಭಾಟಿಯಾ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆರೋಗ್ಯ ಸ್ಥಿತಿ ತೀರಾ ಹದಗೆಟ್ಟ ಕಾರಣ ಅವರನ್ನು ಅಲ್ಲಿಂದ ಶ್ರೀ ಅರಬಿಂದೋ ಇನ್​​ಸ್ಟಿಟ್ಯೂಟ್ ಆಫ್​ ಮೆಡಿಕಲ್ ಸೈನ್ಸಸ್​ಗೆ ಸ್ಥಳಾಂತರಿಸಲಾಗಿತ್ತು.
ಇದನ್ನೂ ಓದಿ:ಬಿಹಾರದಲ್ಲಿ ಮುರಿದು ಬೀಳುತ್ತಾ ನಿತೀಶ್​ ಸರ್ಕಾರ? ಜೆಡಿಯುನ 17 ಶಾಸಕರು ಆರ್​ಜೆಡಿಗೆ ಬರಲು ಸಿದ್ಧರಿದ್ದಾರೆ ಎಂದ ನಾಯಕ
ಅಲ್ಲಿ ಮಗುವನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು, ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಮಗುವಿನ ಪ್ರಾಣ ಹೋಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಶ್ರೀ ಅರಬಿಂದೋ ಇನ್​​ಸ್ಟಿಟ್ಯೂಟ್ ಆಫ್​ ಮೆಡಿಕಲ್ ಸೈನ್ಸಸ್​ನ ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಗುಂಜನ್ ಕೇಲಾ, ಏಳು ತಿಂಗಳ ಗಂಡು ಮಗು ಹೈಡ್ರೋಸೆಫಾಲಸ್​ನಿಂದ ಬಳಲುತ್ತಿದ್ದ. ಪಾಲಕರು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುತ್ತಿದ್ದರು. ತುರ್ತುಪರಿಸ್ಥಿತಿ ಉಂಟಾದ ಕಾರಣ ಇಲ್ಲಿ ಮಗುವನ್ನು ಕರೆತಂದಿದ್ದರು. ದುರದೃಷ್ಟವಶಾತ್ ಮಗು ದಾರಿ ಮಧ್ಯೆ ಪ್ರಾಣ ಕಳೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಗ್ರಾಮಾಯಣ ಫಲಿತಾಂಶದ ಬೆನ್ನಲ್ಲೇ ಕೈ-ಕೈ ಮಿಲಾಯಿಸಿದ್ರು ವಿಜೇತ-ಪರಾಜಿತ ಅಭ್ಯರ್ಥಿಗಳ ಬೆಂಬಲಿಗರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 19 =
Remember me
