ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ 3ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಅರವಿಂದ್​ ಕೇಜ್ರಿವಾಲ್​ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ನವದೆಹಲಿಯ ಕೃಷ್ಣ ಮೆನನ್​ ಮಾರ್ಗದಲ್ಲಿರುವ ಗೃಹ ಸಚಿವರ ನಿವಾಸಕ್ಕೆ ತೆರಳಿ 20 ನಿಮಿಷಗಳ ಕಾಲ ಅವರು ಚರ್ಚೆ ನಡೆಸಿದರು.
ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರ ಜತೆ ನಡೆದ ಚರ್ಚೆ ಫಲಕಾರಿಯಾಗಿದೆ. ದೆಹಲಿ ಎದುರಿಸುತ್ತಿರುವ ಸಂಕಿರ್ಣ ಸಮಸ್ಯೆಗಳ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಅಲ್ಲದೆ ದೆಹಲಿ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೋರಿದೆ. ಇದಕ್ಕೆ ಸ್ಪಂದಿಸಿದ ಗೃಹ ಸಚಿವರು ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಜೋಡಿಸುತ್ತದೆ ಎನ್ನುವ ಭರವಸೆ ನೀಡಿದರು ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರು ಮೊದಲ ಬಾರಿಗೆ ಕೇಂದ್ರ ಗೃಹ ಸಚಿವರ ಜತೆ ಮಾತುಕತೆ ನಡೆಸಿದರು. ಚುನಾವಣೆ ವೇಳೆ ಬಿಜೆಪಿ ಅರವಿಂದ್​ ಕೇಜ್ರಿವಾಲ್​ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. (ಏಜೆನ್ಸೀಸ್​)
Met Hon’ble Home Minister Sh Amit Shah ji. Had a very good and fruitful meeting. Discussed several issues related to Delhi. Both of us agreed that we will work together for development of Delhi
— Arvind Kejriwal (@ArvindKejriwal)February 19, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
