ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ತಡೆಯುವಂತೆ ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರ ಮನೆಗೆ ಮಂಗಳವಾರ ತಡ ರಾತ್ರಿ ಮುತ್ತಿಗೆ ಹಾಕಿದ ಜಾಮಿಯ ಮಿಲಿಯ ಇಸ್ಲಾಮಿಯ ವಿವಿ ಹಳೇ ವಿದ್ಯಾರ್ಥಿಗಳ ಮೇಲೆ ಪೊಲೀಸರು ಜಲಪಿರಂಗಿ ಮೂಲಕ ನೀರು ಹರಿಸಿ ಚದುರಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ವಿದ್ಯಾರ್ಥಿ ಮುಖಂಡರನ್ನು ತಡರಾತ್ರಿ ಬಂಧಿಸಿ ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿದ್ದಾರೆ.
ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯಬೇಕು. ಹಿಂಸಾಚಾರ ನಡೆಸಿದವರನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅರವಿಂದ್​ ಕೇಜ್ರಿವಾಲ್​ ಮನೆಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಹಿಂದಿರುಗುವಂತೆ ಮನವಿ ಮಾಡಿದರು. ಮನವಿಗೂ ಜಗ್ಗದ ಹಿನ್ನೆಲೆಯಲ್ಲಿ ಜಲಪಿರಂಗಿ ಮೂಲಕ ನೀರು ಹರಿಸಿ ಅವರನ್ನು ಚದುರಿಸಿದರು. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಜಾಮಿಯ ಕೋ-ಆರ್ಡಿನೇಷನ್ ಕಮಿಟಿ ಮತ್ತು ಜಾಮಿಯ ಮಿಲಿಯ ಇಸ್ಲಾಮಿಯದ ಹಳೆಯ ವಿದ್ಯಾರ್ಥಿಗಳ ಸಂಘ  ಪ್ರತಿಭಟನೆಯಲ್ಲಿ ಭಾಗವಹಿಸಿತ್ತು.
ಈಶಾನ್ಯ ದೆಹಲಿಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರದಲ್ಲಿ ಈವರೆಗೆ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು ಅಂದಾಜು 190 ಜನರು ಗಾಯಗೊಂಡಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − twelve =
Remember me
