ಹೊಸದಿಲ್ಲಿ:ದೆಹಲಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ತೃತೀಯ ಲಿಂಗಿಗಳಿಗೆ ಉಚಿತ ಪ್ರಯಾಣ ಘೋಷಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ವೀಡಿಯೊ ಮೂಲಕ ಈ ಸಂದೇಶ ನೀಡಿದ್ದಾರೆ. ದೇಶದಲ್ಲಿ ಈ ಹಿಂದಿನ ಸರ್ಕಾರಗಳು ಟ್ರಾನ್ಸ್ಜೆಂಡರ್​ ಸಮುದಾಯಕ್ಕಾಗಿ ಯಾವುದೇ ರೀತಿಯ ಕೆಲಸ ಮಾಡಿಲ್ಲ ಎಂದು ದೂರಿದರು.
ಇದನ್ನೂ ಓದಿ:ರಾಜ್ಯದಲ್ಲಿ ಅಪಘಾತಕ್ಕೆ ನಿತ್ಯ 30 ಬಲಿ: ಪ್ರತಿದಿನ 32 ಮಾರಣಾಂತಿಕ ಆಕ್ಸಿಡೆಂಟ್​ಗಳು
ದೆಹಲಿಯಲ್ಲಿ ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣದ ಕುರಿತು ಮುಂದಿನ ಕೆಲವು ವಾರಗಳಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಭರವಸೆ ನೀಡಿದ ಸಿಎಂ ಕೇಜ್ರಿವಾಲ್, ದೆಹಲಿ ಸರಕಾರವು ತೃತೀಯಲಿಂಗಿ ಸಮುದಾಯಕ್ಕಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂಬ ವಿಷಯವನ್ನು ಹಂಚಿಕೊಳ್ಳಲು ನನಗೆ ಬಹಳ ಸಂತೋಷವಾಗಿದೆ. ಈ ಸಮುದಾಯಕ್ಕೆ ಸೇರಿದ ಜನರು ಯಾವುದೇ ವೆಚ್ಚವಿಲ್ಲದೆ ಪ್ರಯಾಣಿಸಲು ಈಗ ಸುಲಭವಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಸ್ಟೋಕ್ಸ್​​ಗೆ ಬೆರಳು ತೋರಿಸಿ ಸೇಡು ತೀರಿಸಿಕೊಂಡ ಶ್ರೇಯಸ್​ ಅಯ್ಯರ್!
ಕ್ಯಾಬಿನೆಟ್ ಸಭೆಯಲ್ಲಿ ಪ್ರಸ್ತಾವನೆಯನ್ನು ತರಲಾಗುವುದು. ಕ್ಯಾಬಿನೆಟ್ ಅನುಮೋದನೆ ನೀಡಿದ ನಂತರ, ಶೀಘ್ರವೇ ಇದನ್ನು ಜಾರಿಗೊಳಿಸಲಾಗುವುದು. ಸಮಾಜದಲ್ಲಿ ಟ್ರಾನ್ಸ್ಜೆಂಡರ್ ಸಮುದಾಯವನ್ನು ಹೆಚ್ಚಾಗಿ ನಿರ್ಲಕ್ಷಿಸಲಾಗಿದೆ. ಹೀಗಾಗಬಾರದು, ಅವರೂ ಮನುಷ್ಯರೇ, ಅವರಿಗೂ ಸಮಾನ ಹಕ್ಕುಗಳಿವೆ ಎಂಬುದನ್ನು ಒತ್ತಿ ಹೇಳಿದ್ದಾರೆ,(ಏಜೆನ್ಸೀಸ್).
ಖ್ಯಾತ ನಿರ್ದೇಶಕನ ಪುತ್ರಿ, ಹಣ ಉಳಿಸಲು 15 ಕಿ.ಮೀ ಕಾಲ್ನಡಿಗೆ; ಭಾರತದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ನಟಿ ಈಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 14 =
Remember me
