ನವದೆಹಲಿ:ಈಶಾನ್ಯ ದೆಹಲಿಯ ಹಿಂಸಾಚಾರದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಯಾವುದೇ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕು. ಯಾವುದೇ ಆಮ್ ಆದ್ಮಿ ಪಕ್ಷದ ವ್ಯಕ್ತಿ ತಪ್ಪಿತಸ್ಥರೆಂದು ಸಾಬೀತಾದರೆ ಆ ವ್ಯಕ್ತಿಗೆ ಎರಡು ಪಟ್ಟು ಶಿಕ್ಷೆ ವಿಧಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಎಚ್ಚರಿಸಿದ್ದಾರೆ.
ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಯಾವುದೇ ರಾಜಕೀಯ ಇರಬಾರದು ಎಂದು ಅಭಿಪ್ರಾಯ ಪಟ್ಟ ಅವರು, ತಮ್ಮ ಪಕ್ಷದ ಕಾರ್ಯಕರ್ತರಿಗೆ ಖಡಕ್​ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ;ಮೃತದೇಹಗಳ ರಾಶಿಯ ಮೇಲೆ ಆಧುನಿಕ ದೆಹಲಿ ನಿರ್ಮಿಸಲಾಗದು: ಶಾಂತಿ ಕಾಪಾಡಲು ಸಿಎಂ ಕೇಜ್ರಿವಾಲ್​ ಮನವಿ
ಅಲ್ಲದೆ ಹಿಂಸಾಚಾರದಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಅದರಂತೆ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ದೆಹಲಿ ರಾಜ್ಯ ಸರ್ಕಾರದ ಫರಿಶ್ತೆ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.
ಫರಿಶ್ತೆ ಯೋಜನೆಯಡಿ ಯಾವುದೇ ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − two =
Remember me
