ನವದೆಹಲಿ:ಇಂದು ಪಂಜಾಬ್ ಸಿಎಂ ಭಗವಂತ್ ಮಾನ್​ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಈ ಖುಷಿ ಸಂದರ್ಭದಲ್ಲಿರುವ ಎಎಪಿ ನಾಯಕನಿಗೆ ದೆಹಲಿಯ ಇಡಿ ಕಸ್ಟಡಿಯಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ವಿಶೇಷ ಅಭಿನಂದನೆ ತಿಳಿಸಿದರು. ಭಗವಂತ್ ಮಾನ್ ಅವರ ಪತ್ನಿಯನ್ನು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಈ ವೇಳೆ ದಂಪತಿಗೆ ಪುತ್ರಿಯ ಜನನವಾಗಿದೆ.
ಇದನ್ನೂ ಓದಿ:ಮಾಜಿ ಸಿಎಂ ಎಚ್ಡಿಕೆ ಸಂಧಾನ ಸಫಲ: ಜೆಡಿಎಸ್‌ಗೆ ಮರಳಿದ ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ
ಮದ್ಯದ ನೀತಿ ಪ್ರಕರಣದ ವಿಚಾರಣೆಯ ನಂತರ ನ್ಯಾಯಾಲಯದಿಂದ ಹೊರಬರುತ್ತಿದ್ದ ಕೇಜ್ರಿವಾಲ್, “ಭಗವಂತ್ ಮಾನ್ ದಂಪತಿಗೆ ಹೆಣ್ಣು ಮಗುವಾಗಿದೆ. ಅವರಿಗೆ ನಾನು ಅಭಿನಂದಿಸುತ್ತೇನೆ” ಎಂದರು. ಇನ್ನು ಈ ವಿಷಯವನ್ನು ಎಕ್ಸ್​ನಲ್ಲಿ ತಿಳಿಸಿದ ( ಈ ಹಿಂದೆ ಟ್ವಿಟರ್) ಭಗವಂತ್ ಮಾನ್, “ದೇವರು ಮಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ” ಎಂದರು.

ಈ ಮಧ್ಯೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಬಂಧನವನ್ನು ಏಪ್ರಿಲ್ 1ರವರೆಗೆ 4 ದಿನಗಳವರೆಗೆ ವಿಸ್ತರಿಸಿದೆ. ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾರ ಮುಂದೆ ಹಾಜರುಪಡಿಸಲಾಯಿತು, ಅಲ್ಲಿ ತನಿಖಾ ಸಂಸ್ಥೆಯು ಕೇಜ್ರಿವಾಲ್​ರನ್ನು ಏಳು ದಿನಗಳ ಕಾಲ ಕಸ್ಟಡಿಗೆ ಕೋರಿದ್ದು, ಪ್ರಕರಣದೊಂದಿಗೆ ಸಂಬಂಧ ಹೊಂದಿರುವ ಕೆಲವು ವ್ಯಕ್ತಿಗಳನ್ನು ಕರೆಸಬೇಕಿದೆ ಎಂದು ತಿಳಿಸಿದೆ,(ಏಜೆನ್ಸೀಸ್).
ಅಂದು RCB 263… ಇಂದು SRH 277! ಎರಡು ದಾಖಲೆಯ ಸಮಯದಲ್ಲೂ ತಂಡದಲ್ಲಿದ್ದ ಏಕೈಕ ಆಟಗಾರ ಇವರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + nine =
Remember me
