ನವದೆಹಲಿ:ಇತ್ತೀಚೆಗಷ್ಟೇ ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಪರವಾಗಿ ಪ್ರಚಾರ ನಡೆಸಲು ಜೂನ್​ 01ರವರೆಗೂ ಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಈ ಚುನಾವಣೆಯಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಇಂಡಿಯಾ ಮೈತ್ರಿಕೂಟ ಕೇಂದ್ರ ಸರ್ಕಾರವನ್ನು ರಚಿಸುವ ನಿರೀಕ್ಷೆಯಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:VIJAYAVANI Education Expo 2024 | ವಿಜಯವಾಣಿ ಎಜುಕೇಷನ್ ಎಕ್ಸ್​ಪೋ | Bangalorestudy.com
ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್,“ಲೋಕಸಭಾ ಚುನಾವಣೆಯ ಐದನೇ ಹಂತವನ್ನು ನಡೆಸಲಾಗಿದ್ದು, ನಿನ್ನೆಯಷ್ಟೇ ವೋಟಿಂಗ್ ಕೂಡ ಮುಗಿದಿದೆ. ಜೂನ್ 4ರಂದು ಹೊರಬರುವ ಫಲಿತಾಂಶದಲ್ಲಿ ಬಿಜೆಪಿಗೆ ಭಾರೀ ಮುಖಭಂಗ ಉಂಟಾಗಲಿದೆ. ಕಾರಣ, ಈ ಬಾರಿ ಬಿಜೆಪಿ ಸೋಲುತ್ತದೆ” ಎಂದು ಹೇಳಿದರು.
ಸಮೀಕ್ಷೆಯ ಫಲಿತಾಂಶಗಳ ಪ್ರಕಾರ, ಇಂಡಿಯಾ ಮೈತ್ರಿಕೂಟವು 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತದೆ. ನಮ್ಮದೇ ಸರ್ಕಾರ ಸ್ಥಾಪನೆಯಾಗಲಿದೆ ಎಂದ ದೆಹಲಿ ಸಿಎಂ, “ನಿನ್ನೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾದ ಅಮಿತ್ ಶಾ ಮಾತು ಕೇಳಲು ಬಂದಿದ್ದು ಕೇವಲ 500 ಮಂದಿ ಮಾತ್ರ” ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:ಸಿಎಸ್​ಕೆ ವಿರುದ್ಧ ಗೆದ್ದು ಆರ್​ಸಿಬಿ ಪ್ಲೇಆಫ್​ ಪ್ರವೇಶಿಸಲು ಈಕೆಯೂ ಕಾರಣವಂತೆ! ಇಲ್ಲಿದೆ ವಿಡಿಯೋ ಸಾಕ್ಷಿ…
“ಅಮಿತ್ ಶಾ ಹೇಳ್ತಾರೆ, ಎಎಪಿ ಪಕ್ಷವನ್ನು ಬೆಂಬಲಿಸುವವರು ಪಾಕಿಸ್ತಾನಿಗಳಂತೆ. ಹಾಗಾದ್ರೆ, 62 ಕ್ಷೇತ್ರಗಳಲ್ಲಿ ನಮ್ಮನ್ನು ಗೆಲ್ಲಿಸಿ, ನಮ್ಮ ಸರ್ಕಾರ ರಚನೆಗೆ ಕಾರಣರಾಗಿರುವ ಇದೇ ದೆಹಲಿಯ ಜನತೆ ಪಾಕಿಸ್ತಾನಿಗಳೇ?” ಎಂದು ನೇರವಾಗಿ ಪ್ರಶ್ನಿಸಿದ್ದಾರೆ,(ಏಜೆನ್ಸೀಸ್).
ನಿವೃತ್ತಿ ಬಗ್ಗೆ ನಮಗೆ ಸ್ಪಷ್ಟನೆ ಇಲ್ಲ! ಆದ್ರೆ, ಹೋಗುವ ಮುನ್ನ ಧೋನಿ ಹೇಳಿದ್ದು ಇದೊಂದು ಮಾತು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + seven =
Remember me
