ನವದೆಹಲಿ:ದುರುಳನೊಬ್ಬ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ತಲೆಗೆ ಕತ್ತರಿಯಿಂದ ಇರಿದು ಪರಾರಿಯಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.ಮಂಗಳವಾರ ಇಲ್ಲಿಯ ಪೀರಾ ಗಾರ್ಹಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಹೊರಳಾಡುತ್ತಿದ್ದ ಆಕೆಯನ್ನು ದಾರಿಹೋಕರು ಗಮನಿಸಿದಾಗ ಇದು ಬೆಳಕಿಗೆ ಬಂದಿದೆ. ಚಿಕಿತ್ಸೆಗಾಗಿ ಆಕೆಯನ್ನು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಘಟನೆಗೆ ಸಂಬಂಧಿಸಿದಂತೆ ತೀವ್ರ ಬೇಸರ ವ್ಯಕ್ತಪಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಬಾಲಕಿಯನ್ನು ಭೇಟಿಯಾಗಲು ಏಮ್ಸ್ ಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಹೃದಾಯಾಘಾತದಿಂದ ತೆಲಂಗಾಣ ಶಾಸಕ ರಾಮಲಿಂಗಾ ರೆಡ್ಡಿ ನಿಧನ
ಘಟನೆಯಿಂದ ತೀವ್ರ ಬೇಸರವಾಗಿದ್ದು, ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಬಾಲಕಿ ಮೇಲೆ ಅಪರಿಚಿತ ವ್ಯಕ್ತಿ ಅತ್ಯಾಚಾರವೆಸಗಿ, ಕತ್ತರಿಗಳಿಂದ ಆಕೆಗೆ ತಲೆಗೆ ಇರಿದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ವಶಕ್ಕೆ ಪಡೆದರೂ ಇನ್ನೂ ಯಾರನ್ನೂ ಆರೋಪಿಗಳೆಂದು ಗುರುತಿಸಿಲ್ಲ.ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.ಕಳೆದ ಜುಲೈನಲ್ಲಿ, ಹರಿಯಾಣದಲ್ಲಿ 6 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯಾತ ಅತ್ಯಾಚಾರವೆಸಗಿದ್ದ.  ಅಂದು, ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ ಆರೋಪಿ ಬಾಲಕಿಯ ಮನೆಗೆ ಬಂದು ವಾಶ್ ರೂಂನಲ್ಲಿ ಅತ್ಯಾಚಾರ ಎಸಗಿದ್ದ. ಕೆಲಸದಿಂದ ಮನೆಗೆ ಮರಳಿದಾಗ ಬಾಲಕಿ ಈ ಘಟನೆಯನ್ನು ತನ್ನ ತಾಯಿಗೆ ಹೇಳಿದಳು. ತಕ್ಷಣ ಪೊಲೀಸರಿಗೆ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲಿಸರು ಆರೋಪಿಯನ್ನು ಬಂಧಿಸಿದರು. ಈ ಅತ್ಯಾಚಾರ ಘಟನೆಯಲ್ಲಿ ಕೂಡ ಆರೋಪಿ ಅಪ್ರಾಪ್ತ ಬಾಲಕಿಯ ಗುಪ್ತಾಂಗಗಳನ್ನು ಗಾಯಗೊಳಿಸಿದ್ದ. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಪ್ರೇಮಿಯ ಜತೆ ಮಗಳನ್ನೇ ಜೀವಂತ ಸುಟ್ಟುಕೊಂದ ಪಾಲಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 3 =
Remember me
