ನವದೆಹಲಿ:ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿರುವ ಐಎಎಸ್​ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರರಕಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ಕೊಹ್ಲಿ ಹೀಗೆ ಮಾಡಿದ್ದು ಇಷ್ಟವಾಗಲಿಲ್ಲ.. ಬೆಡ್​ರೂಮ್ ಸೀಕ್ರೆಟ್ ಬಿಚ್ಚಿಟ್ಟ ಅನುಷ್ಕಾ!
ಕಟ್ಟಡದ ಮಾಲೀಕ ಅಭಿಷೇಕ್ ಗುಪ್ತಾ ಹಾಗೂ ಕೋಚಿಂಗ್ ಸೆಂಟರ್​ನ ಸಂಯೋಜಕ ದೇಶಪಾಲ್​ ಸಿಂಗ್ ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಓಲ್ಡ್​ ರಾಜೇಂದರ್ ನಗರದಲ್ಲಿರುವ ರಾವು ಅವರ ಐಎಎಸ್ ತರಬೇತು ಕೇಂದ್ರದ ಬಳಿಯ ಅತಿಕ್ರಮಣಗಳನ್ನು ತೆಗೆದುಹಾಕಲು ಬುಲ್ಡೋಜರ್ ಕ್ರಮ ಪ್ರಾರಂಭವಾಗಿದೆ.
ಸೋಮವಾರ ರಾಷ್ಟ್ರ ರಾಜಧಾನಿ ಸಂಸ್ಥೆಯ ಹೊರಭಾಗದಲ್ಲಿ ಚರಂಡಿಯನ್ನು ಮುಚ್ಚಿ ನಿರ್ಮಿಸಿರುವ ಫುಟ್ ಪಾತ್ ಬುಲ್ಡೋಜರ್ ಬಳಸಿ ಕೆಡವಲಾಗುತ್ತಿದೆ. ಕಾರ್ಯಾಚರಣೆಗೆ ದೆಹಲಿ ಪೊಲೀಸರು ಈಗಾಗಲೇ ಅನುಮತಿ ನೀಡಿದ್ದರು.
#WATCH| Action against alleged encroachment being taken in Delhi’s Old Rajinder Nagar, where 3 students died due to drowning at an IAS coaching institute on 27th July; Officials from local administration and Police presentpic.twitter.com/t0Efn6KL1p
— ANI (@ANI)July 29, 2024

ಯಾರೇ ತಪ್ಪು ಮಾಡಿದರೂ ಬಿಡುವುದಿಲ್ಲ:ಈ ಘಟನೆಯಲ್ಲಿ ಯಾರೇ ತಪ್ಪು ಮಾಡಿದರೂ ಬಿಡುವುದಿಲ್ಲ ಎಂದು ಉಪ ಪೊಲೀಸ್ ಆಯುಕ್ತ ಎಂ.ಹರ್ಷವರ್ಧನ್ ಹೇಳಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದ್ದೇವೆ ಮತ್ತು ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ. ಕಟ್ಟಡದ ವಿವಿಧ ಮಹಡಿಗಳನ್ನು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಕಟ್ಟಡದ ರಚನೆ ಮತ್ತು ಪ್ರದೇಶದ ಒಳಚರಂಡಿ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸ್ಥಳೀಯ ಪುರಸಭೆಯ ಪಾತ್ರವನ್ನು ಪರಿಶೀಲಿಸುತ್ತಿದ್ದಾರೆ.
ದೆಹಲಿ ಅಗ್ನಿಶಾಮಕ ಸೇವೆಯು ಕಟ್ಟಡ ಮತ್ತು ಅದರ ನೆಲಮಾಳಿಗೆಯನ್ನು ಪರಿಶೀಲಿಸುತ್ತಿದೆ, ಇದನ್ನು ಅಕ್ರಮವಾಗಿ ಗ್ರಂಥಾಲಯವಾಗಿ ಬಳಸಲಾಗುತ್ತಿತ್ತು. ಈ ಪ್ರದೇಶದ ಒಳಚರಂಡಿ ವ್ಯವಸ್ಥೆ ಕುರಿತು ಪೊಲೀಸರು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿ ಮಾಹಿತಿ ಕೋರಿ ನೋಟಿಸ್ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವ್ಯವಸ್ಥೆಯನ್ನು ನಿರ್ವಹಿಸುವ ಹೊಣೆ ಹೊತ್ತಿರುವವರನ್ನು ಎಫ್‌ಐಆರ್‌ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ.
ಹದಿಮೂರು ಕೋಚಿಂಗ್ ಸೆಂಟರ್‌ಗಳಿಗೆ ಬೀಗ:ಕಾರ್ಯಾಚರಣೆ ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡಿದ ನಂತರ ಬುಲ್ಡೋಜರ್‌ಗಳು ಕೋಚಿಂಗ್ ಸೆಂಟರ್ ಬಳಿ ಅತಿಕ್ರಮಣಗಳನ್ನು ತೆಗೆದುಹಾಕುತ್ತಿವೆ. ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು, ಕೋಚಿಂಗ್ ಸೆಂಟರ್‌ನಲ್ಲಿ ಸುರಕ್ಷತೆ ಉಲ್ಲಂಘನೆ ಮತ್ತು ಅಕ್ರಮ ಬೇಸ್‌ಮೆಂಟ್ ಕಾರ್ಯಾಚರಣೆಗಳು ಸಾವಿಗೆ ಕಾರಣವಾಗಿವೆ. ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ದೆಹಲಿ ಕೋಚಿಂಗ್ ಹಬ್‌ಗೆ ನಾಗರಿಕ ಮಂಡಳಿಯ ತಂಡ ಭೇಟಿ ನೀಡಿದೆ ಎಂದು ದೆಹಲಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯಾಚರಣೆಯ ಸಮಯದಲ್ಲಿ ಅಂತಹ ಹದಿಮೂರು ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಲಾಯಿತು.
ಹೆಚ್ಚುತ್ತಿರುವ ಸಾರ್ವಜನಿಕ ಆಕ್ರೋಶದ ನಡುವೆ, ಹಳೆಯ ರಾಜೇಂದ್ರ ನಗರ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿ ಕೋಚಿಂಗ್ ಸೆಂಟರ್‌ನ ಹೊರಗೆ ಪ್ರತಿಭಟನೆ ನಡೆಸಿದರು. “ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ನಾವು ಅರೆಸೈನಿಕ ಪಡೆಗಳು ಮತ್ತು ಪೊಲೀಸರನ್ನು ಪ್ರದೇಶದಲ್ಲಿ ನಿಯೋಜಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂವರು ಐಎಎಸ್ ಆಕ್ಷಾಂಕ್ಷಿಗಳ ಸಾವು:ಶನಿವಾರ ಸಂಜೆ ಭಾರೀ ಮಳೆಯ ನಂತರ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ನೀರು ನುಗ್ಗಿದಾಗ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿದಂತೆ 35 ಕ್ಕೂ ಹೆಚ್ಚು ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ. ಈ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು-ಯುಪಿಯ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಮತ್ತು ಕೇರಳದ ನವೀನ್ ಡಾಲ್ವಿನ್ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.  ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಘಟನೆಯ ತನಿಖೆಗಾಗಿ ಅನೇಕ ತಂಡಗಳನ್ನು ರಚಿಸಿದ್ದಾರೆ. ದುರಂತದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ದೆಹಲಿ ಸರ್ಕಾರ ಆದೇಶಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
