ನವದೆಹಲಿ:ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿಯೂ ಒಂದೂ ಕ್ಷೇತ್ರಗಳನ್ನು ಗೆಲ್ಲದ ಕಾಂಗ್ರೆಸ್​ ತೀವ್ರ ಮುಖಭಂಗಕ್ಕೊಳಗಾಗಿದೆ.
ಫಲಿತಾಂಶದ ಬೆನ್ನಲ್ಲೇ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸುಭಾಷ್​ ಚೋಪ್ರಾ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್​ ಒಂದೂ ಕ್ಷೇತ್ರವನ್ನು ಗೆಲ್ಲದೆ ಇರುವುದಷ್ಟೇ ಅಲ್ಲ, ಮೂರು ಕ್ಷೇತ್ರಗಳನ್ನು ಹೊರತುಪಡಿಸಿದರೆ ಉಳಿದ ಕ್ಷೇತ್ರಗಳಲ್ಲಿ ಠೇವಣಿ ಗಳಿಸಲೂ ವಿಫಲವಾಗಿದೆ.
ಈ ಹೀನಾಯ ಸೋಲಿನ ಹೊಣೆ ಹೊತ್ತ ಸುಭಾಷ್​ ಚೋಪ್ರಾ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್​ನದ್ದು ಶೂನ್ಯ ಸಾಧನೆಯೇ ಆಗಿತ್ತು. ಬಳಿಕ ಸುಭಾಷ್​ ಚೋಪ್ರಾ ಪಕ್ಷವನ್ನು ತಳಮಟ್ಟದಿಂದ, ಹೊಸದಾಗಿ ಕಟ್ಟುವ ಪ್ರತಿಜ್ಞೆ ಮಾಡಿದ್ದರು. ಆದರೆ ಈ ಬಾರಿಯೂ ಅದೇ ವಿಫಲತೆ ಮರುಕಳಿಸಿದೆ.
ಜನರ ಆದೇಶ ನಮ್ಮ ವಿರುದ್ಧವಾಗಿದೆ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ. ಈ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತೇವೆ ಎಂದು ಕಾಂಗ್ರೆಸ್​ ಮುಖ್ಯ ವಕ್ತಾರ ರಣದೀಪ್​ ಸುರ್ಜೇವಾಲಾ ಹೇಳಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + eighteen =
Remember me
