ನವದೆಹಲಿ:ಮಹಿಳಾ ಪ್ರತಿಭಟನಾಕಾರರಿಂದ ಪ್ಯಾಲೆಸ್ತೀನ್ ಧ್ವಜವನ್ನು ದೆಹಲಿ ಪೊಲೀಸ್ ಸಿಬ್ಬಂದಿಯೊಬ್ಬರು ಕಸಿದ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಇದನ್ನೂ ಓದಿ:ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ದಾಳಿಯ ಹೊಣೆಹೊತ್ತು ಪೊಲೀಸರಿಗೆ ಶರಣಾದ ಆರೋಪಿ
ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಕ್ರಮವನ್ನು ಪ್ರತಿಭಟಿಸಲು ಮತ್ತು ಪ್ಯಾಲೆಸ್ತೀನ್‌ಗೆ ಬೆಂಬಲಿಸಲು ಹಲವಾರು ವಿದ್ಯಾರ್ಥಿಗಳು ಮತ್ತು ನಾಗರಿಕ ಸಮಾಜದ ಸದಸ್ಯರು ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರನ್ನು ಬಂಧಿಸಿದ್ದಾರೆ.
मित्र देश का झंडा फाड़ना अपराध और उसका अपमान हैं. भारत फिलीस्तीन के साथ हैं, भारत में फिलिस्तीन का दूतावास हैं उसके बावजूद दिल्ली पुलिस का जवान एक महिला से फिलिस्तीन का झंडा छीन कर फाड़ देता हैं.#FreePalestine#Gaza_Genocide#Israelpic.twitter.com/fJk36W803n
— Mohammad Ali (@MohdAliJourno)October 29, 2023

ಪ್ರತಿಭಟನೆಯ ಸ್ಥಳದಲ್ಲಿದ್ದ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ಸಂಕ್ಷಿಪ್ತವಾಗಿ ಬಂಧಿಸಿದರು. ಬಂಧಿತರನ್ನು ಕರೆದೊಯ್ಯುತ್ತಿದ್ದಾಗ ಮಹಿಳಾ ಪ್ರತಿಭಟನಾಕಾರರೊಬ್ಬರು ಕೈಯಲ್ಲಿಡಿದಿದ್ದ ಪ್ಯಾಲೆಸ್ತೀನ್ ಕಾಗದದ ಧ್ವಜವನ್ನು ಪೊಲೀಸ್​ ಸಿಬ್ಬಂದಿಯೊಬ್ಬರು ಆಕೆಯಿಂದ ಕಸಿದುಕೊಂಡರು. ಈ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ಇದನ್ನೂ ಓದಿ:ವಾರಕ್ಕೆ 55 ಗಂಟೆ ಅಥವಾ ಅದಕ್ಕೂ ಹೆಚ್ಚು ಕೆಲಸ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ: ಅಧ್ಯಯನದ ವಿವರ ಇಲ್ಲಿದೆ..
ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಪ್ರತಿಭಟನಾಕಾರರು ಪ್ರತ್ಯೇಕ ಗುಂಪುಗಳಲ್ಲಿ ಜಂತರ್ ಮಂತರ್‌ಗೆ ಆಗಮಿಸಿದ್ದರು. ಈ ವೇಳೆ ಪೊಲೀಸ್​ ಅಧಿಕಾರಿಗಳು ಅವರನ್ನು ಬಂಧಿಸಿದರು. ಪ್ರತಿಭಟನಾಕಾರರಿಗೆ ಅನುಮತಿಯಿಲ್ಲದ ಕಾರಣ, ಬಂಧಿಸಲಾಗಿದೆ. ದೆಹಲಿಯ ವಿವಿಧ ಪೊಲೀಸ್ ಠಾಣೆಗಳಿಗೆ ಬಂಧಿತರನ್ನು ಕರೆದೊಯ್ದಿದ್ದಾರೆ,(ಏಜೆನ್ಸೀಸ್).
ಭಯಾನಕ ಲುಕ್​ನಲ್ಲಿ ನಟಿ ಹನ್ಸಿಕಾ; ‘ಗಾರ್ಡಿಯನ್’​​ಗೆ ಫ್ಯಾನ್ಸ್​ ಕಾತರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − ten =
Remember me
