ನವದೆಹಲಿ:ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್‌ ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ.
ಇದನ್ನೂ ಓದಿ:ನನ್ನ ಭೇಟಿಗೆ ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತರಬೇಕು: ಸಂಸದೆ ಕಂಗನಾ ರಣಾವತ್‌!
ನ್ಯಾಯಮೂರ್ತಿ ಅನೂಪ್ ಕುಮಾರ್ ಮೆಂದೀರತ್ತ ಅವರು ಜುಲೈ 10 ರಂದು ಬಿಭವ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪನ್ನು ಜುಲೈ 12 ರಂದು ಪ್ರಕಟಿಸುವುದಾಗಿ ಆದೇಶ ಕಾಯ್ದಿರಿಸಿದ್ದರು. ಅದರಂತೆ ಇಂದು ಆದೇಶ ಪ್ರಕಟಿಸಿದ್ದಾರೆ.
ಬಿಭವ್​ ಕುಮಾರ್ ಅವರು ಕೇಜ್ರಿವಾಲ್ ಅವರ ಆಪ್ತ ಸಹಾಯಕ (ಪಿಎಸ್) ಆಗಿರುವುದರಿಂದ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಮತ್ತು ಸಾಕ್ಷ್ಯವನ್ನು ತಿರುಚುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಮಲಿವಾಲ್ ಶುಕ್ರವಾರ (ಮೇ 17) ಬಿಭವ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಬಿಭವ್ ಕುಮಾರ್ ಆಕೆಗೆ ಏಳು-ಎಂಟು ಬಾರಿ ಕಪಾಳಕ್ಕೆ ಹೊಡೆದಿದ್ದಾನೆ. ಎದೆ, ಹೊಟ್ಟೆ ಮತ್ತು ಸೊಂಟದ ಪ್ರದೇಶಕ್ಕೆ ಒದೆದಿದ್ದಾನೆ. ಜೊತೆಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿದ್ದಾರೆ.
ಕಳೆದ ಮೇ 13 ರಂದು, ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಯ ಘಟನೆ ಬೆಳಕಿಗೆ ಬಂದಿತ್ತು. ಅವರು ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿಕಟವರ್ತಿ ವಿಭವ್ ಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಇದರ ನಂತರ, ಅವರು ಎಫ್‌ಐಆರ್ ದಾಖಲಿಸಿದ್ದರು. ಶುಕ್ರವಾರ ನ್ಯಾಯಾಲಯದ ಮುಂದೆ ತಮ್ಮ ಹೇಳಿಕೆಯನ್ನು ದಾಖಲಿಸಿ ವಿಭವ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಪ್ರಕರಣವನ್ನು ದಾಖಲಿಸಿದ ನಂತರ, ದೆಹಲಿ ಪೊಲೀಸರು ವಿಭವ್‌ನನ್ನು ಬಂಧಿಸಲು ನಿರಂತರವಾಗಿ ತನಿಖೆ ನಡೆಸುತ್ತಿದ್ದರು.
ಅಚ್ಚ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 1 =
Remember me
