ನವದೆಹಲಿ:ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಜೈಲುಪಾಲಾಗಿರುವ ಉಗ್ರ, ಬಾರಾಮುಲ್ಲಾ ಸಂಸದ ಇಂಜಿನಿಯರ್​ ರಶೀದ್​ಗೆ ದೆಹಲಿಯ ಪಟಿಯಾಲಾ ಹೌಸ್​ ಕೋರ್ಟ್​ ಮಂಗಳವಾರ (ಸೆಪ್ಟೆಂಬರ್​ 10) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಹಾಲಿ ನಡೆಯುತ್ತಿರುವ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸುವ ಸಲುವಾಗಿ ಮಧ್ಯಂತರ ಜಾಮೀನು ಕೋರಿ ರಶೀದ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಪಟಿಯಾಲಾ ಹೌಸ್​ ಕೋರ್ಟ್​ನೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ರಶೀದ್​ಗೆ ಜಾಮೀನು ಮಂಜೂರು ಮಾಡಿದ್ದಾರೆ.
ಇದನ್ನೂ ಓದಿ:ಮಾಧ್ಯಮಗಳಿಗೆ ಹೈಕೋರ್ಟ್​ ನಿರ್ಬಂಧದ ಬೆನ್ನಲ್ಲೇ ಪತ್ನಿಗೆ ಕರೆ ಮಾಡಿ ಈ ಬೇಡಿಕೆಯಿಟ್ಟ ದರ್ಶನ್​
ಎಂಜಿನಿಯರ್ ರಶೀದ್ ಎಂದೇ ಖ್ಯಾತಿ ಪಡೆದಿರುವ  ಶೇಖ್ ಅಬ್ದುಲ್ ರಶೀದ್, 2024ರ ಲೋಕಸಭಾ ಚುನಾವಣೆಯಲ್ಲಿ ಬಾರಾಮುಲ್ಲಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರ ವಿರುದ್ಧ ಜಯ ಸಾಧಿಸಿದ್ದರು. ಜುಲೈ 5 ರಂದು, ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ನ್ಯಾಯಾಲಯ ರಶೀದ್‌ಗೆ ಕಸ್ಟಡಿ ಪೆರೋಲ್ ನೀಡಿತ್ತು .
2017ರಲ್ಲಿ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕ ಗುಂಪುಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಎನ್‌ಐಎ ರಶೀದ್ ವಿರುದ್ಧ ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. 2019ರಿಂದ ಅವರು ಜೈಲಿನಲ್ಲಿದ್ದಾರೆ. ಇದೀಗ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲೆಂದು ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಅಕ್ಟೋಬರ್​ 02ರವರೆಗೆ ಅವರ ಜಾಮೀನು ಅವಧಿ ಚಾಲ್ತಿಯಲ್ಲಿರಲಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × two =
Remember me
