ನವದೆಹಲಿ:ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕಿ, ಶಿಕ್ಷಣ ಸಚಿವೆ ಅತಿಶಿ ಅವರಿಗೆ ರೂಸ್​ ಅವೆನ್ಯೂ ನ್ಯಾಯಾಲಯವು ಸಮನ್ಸ್​ ಜಾರಿ ಮಾಡಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ ಮತ ಎಣಿಕೆ: ಜೂ.4ರಂದು ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿ!
ಜೂನ್ 29 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಸಮನ್ಸ್​ನಲ್ಲಿ ಉಲ್ಲೇಖಿಸಿಲಾಗಿದೆ. ಇತ್ತೀಚೆಗೆ ಬಿಜೆಪಿ ವಕ್ತಾರ ಶಂಕರ್​ ಕಪೂರ್​ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮತ್ತು ಸಚಿವೆ ಅತಿಶಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು.
Delhi's Rouse Avenue Court reserves order on ED's Supplementary chargesheet (prosecution complaint) filed against Delhi Chief Minister Arvind Kejriwal, Aam Aadmi Party (AAP) in connection with a money laundering case related to Excise Policy case. The Court fixed June 4 for…
— ANI (@ANI)May 28, 2024

ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಭಾರೀ ಹಿನ್ನಡೆಯಾಗಿದೆ. ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ಮತ್ತಷ್ಟು ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್‌ ಸಿಕ್ಕಿತ್ತು. ಇದೀಗ ತಮ್ಮ ಆರೋಗ್ಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಜಾಮೀನು ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು.
ಏನಿದು ಅಬಕಾರಿ ನೀತಿ ಹಗರಣ?ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.
ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ 100 ಕೋಟಿ ರೂ. ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪ ಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು.
ಮುಂಬೈನ ತಾಜ್ ಹೋಟೆಲ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಭದ್ರತಾ ಪಡೆಯಿಂದ ಶೋಧ ಕಾರ್ಯ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:11 − 3 =
Remember me
