ನವದೆಹಲಿ: ಮಾರಕ ಕೊರೊನಾ ವೈರಸ್​ ಸೋಂಕಿತರಿಗೆ ತುರ್ತು ಚಿಕಿತ್ಸೆ ನೀಡಲು ಹಾಗೂ ವೈರಸ್​ ಹರಡುವುದನ್ನು ನಿಯಂತ್ರಿಸಲು ಸರ್ಕಾರ ತುರ್ತು ಕಾರ್ಯಪಡೆ ರಚನೆ ಮಾಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಹೇಳಿದರು.
ನನ್ನ ನೇತೃತ್ವದಲ್ಲಿ ಕಾರ್ಯಪಡೆ ರಚನೆಯಾಗಿದ್ದು ಆರೋಗ್ಯ ಇಲಾಖೆಯ ಸಿಬ್ಬಂದಿ ಪಡೆಯಲ್ಲಿದ್ದಾರೆ. ವೈರಸ್​ ನಿಯಂತ್ರಿಸಲು ಈ ಕಾರ್ಯಪಡೆ ತುರ್ತುಕ್ರಮ ಕೈಗೊಳ್ಳಲಿದೆ. ಹೀಗಾಗಿ ಜನರು ಭೀತಿ ಪಡುವ ಅವಶ್ಯಕತೆ ಇಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ದೆಹಲಿಯ ಲೇಡಿ ಹಾರ್ಡಿಂಗ್ ಹಾಗೂ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಲಾಗುವುದು ಎಂದು ಹೇಳಿದರು.
ದೇಶದಲ್ಲಿ 28 ಮಂದಿಗೆ ಕೊರೊನಾ ವೈರಸ್​ ತಗುಲಿದೆ. 14 ಮಂದಿ ಇಟಲಿ ಪ್ರವಾಸಿಗರು ಹಾಗೂ ಅವರೊಂದಿಗೆ ಸಂಪರ್ಕಕ್ಕೆ ಬಂದ ಭಾರತೀಯರನ್ನು ಕೂಡ ತಪಾಸಣೆಗೆ ಒಳಪಡಿಸಲಾಗಿದೆ.
ರಾಷ್ಟ್ರಕ್ಕೆ ವಿದೇಶದಿಂದ ಆಗಮಿಸುವ ಎಲ್ಲ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್​ ಇದೇ ವೇಳೆ ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 9 =
Remember me
