ನವದೆಹಲಿ:ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಮನವಿಯನ್ನು ಆಲಿಸಲು ಸುಪ್ರೀಂಕೋರ್ಟ್​​​ ಮಂಗಳವಾರ(ಜುಲೈ 16) ಒಪ್ಪಿಗೆ ನೀಡಿದೆ.
ಇದನ್ನು ಓದಿ:ಸಿಎಂ ಕೇಜ್ರಿವಾಲ್​​ 8.5 ಕೆಜಿ ಅಲ್ಲ ಕಡಿಮೆ ಆಗಿರೋದಿಷ್ಟೆ…. ಜೈಲಿನ ಸೂಪರಿಂಟೆಂಡೆಂಟ್ ಕೊಟ್ಟ ಸ್ಪಷ್ಟನೆ ಹೀಗಿದೆ
ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠವು ಅವರ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಗೂ ನೋಟಿಸ್ ಜಾರಿ ಮಾಡಿದೆ. ಎರಡೂ ತನಿಖಾ ಸಂಸ್ಥೆಗಳು ದಾಖಲಿಸಿರುವ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಜಾಮೀನು ಕೋರಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 29ಕ್ಕೆ ನಿಗದಿಪಡಿಸಲಾಗಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸಿಸೋಡಿಯಾ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಮರುಪರಿಶೀಲಿಸುವಂತೆ ಅವರ ಮನವಿಯನ್ನೂ ಪೀಠವು ವಿಚಾರಣೆ ನಡೆಸುತ್ತಿದೆ.
ಪೀಠದಲ್ಲಿ ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಕೂಡ ಇದ್ದಾರೆ. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸಿಸೋಡಿಯಾ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಮರುಪರಿಶೀಲಿಸುವಂತೆ ಅವರ ಮನವಿಯನ್ನೂ ಪೀಠವು ವಿಚಾರಣೆ ನಡೆಸುತ್ತಿದೆ.
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು 2023 ಫೆಬ್ರವರಿ 26ರಂದು ಸಿಬಿಐ ಬಂಧಿಸಿತ್ತು. ಸಿಬಿಐ ದಾಖಲಿಸಿದ ಎಫ್​ಐಆರ್​​ ಮೇರೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ (ಜಾರಿ ನಿರ್ದೇಶನಾಲಯ) ಸಿಸೋಡಿಯಾ ಅವರನ್ನು 2023 ಮಾರ್ಚ್ 9ರಂದು ಬಂಧಿಸಿತ್ತು. ಕಳೆದ ವರ್ಷ ಫೆಬ್ರವರಿ 28 ರಂದು ಸಿಸೋಡಿಯಾ ಅವರು ದೆಹಲಿ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.(ಏಜೆನ್ಸೀಸ್​​)
ಇಮ್ರಾನ್​ಖಾನ್​ ಪಕ್ಷ ನಿಷೇಧಿಸಲು ನಿರ್ಧರಿಸಿದ ಪಾಕ್​ ಸರ್ಕಾರ; ಹೇಳಿದ ಕಾರಣವೇನು ಗೊತ್ತಾ?

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 − three =
Remember me
