ನವದೆಹಲಿ:ಇಡೀ ದೇಶದ ಗಮನ ಸೆಳೆದಿರುವ ದಿಲ್ಲಿ ಲಿಕ್ಕರ್ ಹಗರಣಕ್ಕೆ ಸಂಬಂಧಿಸಿ ಈಗಾಗಲೇ ತಿಹಾರ್ ಜೈಲನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಭಾರತ್ ರಾಷ್ಟ್ರೀಯ ಸಮಿತಿ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ 11 ಕೋಟಿ ಬಹುಮಾನ ಘೋಷಿಸಿದ ಮಹಾರಾಷ್ಟ್ರ ಸಿಎಂ ಶಿಂಧೆ
ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತೆಲಂಗಾಣ ಎಂಎಲ್‌ಸಿಯ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಈ ಹಿಂದೆ ಆದೇಶಿಸಲಾಗಿತ್ತು.
ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅದೇ ಪ್ರಕರಣದಲ್ಲಿ ಏಪ್ರಿಲ್​ನಲ್ಲಿ ಸಿಬಿಐ ಕೂಡ ಅವರನ್ನು ಬಂಧಿಸಿತ್ತು.
ಕೆ ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಕೆಕವಿತಾ ಅವರನ್ನು ಶುಕ್ರವಾರ ಕೋರ್ಟ್​ ಎದುರು ಹಾಜರುಪಡಿಸಲಾಯಿತು.
ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
