ನವದೆಹಲಿ:ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರಿಯಾಗಿ ಅಂಕ ಗಳಿಸಲು ಸಾಧ್ಯವಾಗಲಿಲ್ಲ ಅಂತಾ ಪಾಲಕರಿಗೆ ಹೆದರಿದ 14 ವರ್ಷದ ವಿದ್ಯಾರ್ಥಿನಿಯೊಬ್ಬಳು ಬೈಗುಳಗಳಿಂದ ತಪ್ಪಿಸಿಕೊಳ್ಳಲು ಲೈಂಗಿಕ ದೌರ್ಜನ್ಯ ಕತೆ ಕಟ್ಟಿದ ಪ್ರಕರಣ ದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಈ ಘಟನೆ ದೆಹಲಿಯ ಭಜನಪುರದಲ್ಲಿ ನಡೆದಿದೆ. ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂಬುದನ್ನು ಮನೆಯವರಿಗೆ ನಂಬಿಸಲು ಬಾಲಕಿ ಬ್ಲೇಡ್‌ನಿಂದ ತನಗೆ ತಾನೇ ಹಾನಿ ಮಾಡಿಕೊಂಡಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಮೂವರು ಹುಡುಗರು ನನ್ನನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿ ಗಾಯಗೊಳಿಸಿದ್ದಾರೆ ಎಂದು ಬಾಲಕಿ ಮನೆಯವರಿಗೆ ತಿಳಿಸಿದ್ದಳು. ನಂತರ ಬಾಲಕಿಯ ಪಾಲಕರು ಇದೇ ತಿಂಗಳ 15ರಂದು ಭಜನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.
ಇದನ್ನೂ ಓದಿ:VIDEO | ಕರ್ತವ್ಯ ನಿರತ ಪೊಲೀಸ್​ಗೆ ಸೆಲ್ಯೂಟ್ ಮಾಡಿದ ಬಾಲಕಿ; ಪುಟ್ಟ ಹುಡುಗಿಗೆ ಮೆಚ್ಚುಗೆ ಸೂಚಿಸಿದ ನೆಟ್ಟಿಗರು
ತನಿಖೆಯ ಭಾಗವಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಬಾಲಕಿ ಸುಳ್ಳು ಹೇಳಿರುವುದು ಪೊಲೀಸರಿಗೆ ತಿಳಿದು ಬಂದಿದೆ. ದೃಶ್ಯಾವಳಿಗಳಲ್ಲಿ, ಬಾಲಕಿಯನ್ನು ಅಪಹರಣ ಮಾಡಲಾಗಿದೆ ಎಂದು ಹೇಳಲಾದ ಸ್ಥಳದಲ್ಲಿ ಏಕಾಂಗಿಯಾಗಿ ತಿರುಗಾಡಿರುವುದು ಕಂಡುಬಂದಿದೆ. ನಂತರ ಪೊಲೀಸರು ಬಾಲಕಿಗೆ ಕೌನ್ಸೆಲಿಂಗ್ ಮಾಡಿದಾಗ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಮನೆಯವರಿಗೆ ಸುಳ್ಳು ಹೇಳಿರುವುದು ಬೆಳಕಿಗೆ ಬಂದಿದೆ. ಹೆತ್ತವರು ಬೈಯುತ್ತಾರೆ ಎಂಬ ಭಯವೂ ಇತ್ತು ಎಂದು ಬಾಲಕಿ ಹೇಳಿದ್ದಾಳೆ.
ಬಾಲಕಿಯನ್ನು ಮ್ಯಾಜಿಸ್ಟ್ರೇಟ್‌ಗೆ ಕರೆದೊಯ್ದು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡು ಪ್ರಕರಣವನ್ನು ರದ್ದುಗೊಳಿಸಲಾಗಿದೆ.(ಏಜೆನ್ಸೀಸ್​)
ನನ್ನ ಹೆಂಡ್ತಿಗೆ ಸೊಳ್ಳೆಗಳು ಕಚ್ಚುತ್ತಿವೆ ಕಾಪಾಡಿ.. ಕೆಲವೇ ಕ್ಷಣದಲ್ಲಿ ಸೊಳ್ಳೆ ಬತ್ತಿ ಕೊಟ್ಟ ಪೊಲೀಸ್!

ಲಿಫ್ಟ್​ ಕೇಳಿದ್ದೇ ತಪ್ಪಾಯ್ತಾ? ಮನೆಗೆ ಹೋಗಲಿದ್ದ ವೃದ್ಧ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ್ರು…

15ರ ಬಾಲಕನ ಜತೆ ಎಸ್ಕೇಪ್​ ಆಗಿದ್ದ 19ರ ಯುವತಿಗೆ 10 ವರ್ಷ ಜೈಲು! ಮೆಡಿಕಲ್​ ರಿಪೋರ್ಟ್​ ಬಿಚ್ಚಿಟ್ಟ ರಹಸ್ಯವಿದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 9 =
Remember me
