ನವದೆಹಲಿ:ಇಲ್ಲಿನ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಕರೊನಾ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ತಬ್ಲಿ ಜಮಾತ್‌ನ ಸುಮಾರು 4 ಸಾವಿರ ಸದಸ್ಯರ ಬಿಡುಗಡೆಗೆ ದೆಹಲಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಈ ಎಲ್ಲರೂ ದೇಶದ ನಾನಾ ರಾಜ್ಯಗಳಿಗೆ ಸೇರಿದವರಾಗಿದ್ದು, ಅವರನ್ನು ಅವರವರ ಸ್ಥಳಗಳಿಗೆ ಕಳಿಸಲು ಸಾರಿಗೆಯ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ದೆಹಲಿ ಸರ್ಕಾರ ಸೂಚಿಸಿದೆ. ಈ 4 ಸಾವಿರ ಜನರ ಪೈಕಿ 900 ಜನರು ದೆಹಲಿಯವರೇ ಆಗಿದ್ದಾರೆ. ಬಹುತೇಕ ಜನರು ತೆಲಂಗಾಣ ಮತ್ತು ತಮಿಳುನಾಡಿನವರಾಗಿದ್ದಾರೆ.
ಇದರಲ್ಲಿಯೇ ಕೆಲವರನ್ನು ಪೊಲೀಸ್ ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇದ್ದು, ಅವರನ್ನು ಮಾತ್ರ ಕಸ್ಟಡಿಯಲ್ಲಿ ಉಳಿಸಿಕೊಳ್ಳುವಂತೆ ದೆಹಲಿಯ ಗೃಹ ಸಚಿವ ಸತ್ಯೇಂದರ್ ಜೈನ್ ಆದೇಶಿಸಿದ್ದಾರೆ.
ಇದನ್ನೂ ಓದಿಕರೊನಾದಿಂದಾಗಿ ಶಿರಡಿ ಸಾಯಿಬಾಬಾ ಟ್ರಸ್ಟ್‌ಗೆ ಪ್ರತಿದಿನ ಒಂದೂವರೆ ಕೋಟಿ ರೂ. ನಷ್ಟ!
ಲಾಕ್‌ಡೌನ್ ನಿಯಮ ಉಲ್ಲಂಘಿಸಿ ದೆಹಲಿಯ ನಿಜಾಮುದ್ದೀನ್‌ನಲ್ಲಿ ಸಮಾವೇಶ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಸಾವಿರಾರು ಜನರನ್ನು ಪೊಲೀಸರು ಬಂಧಿಸಿದ್ದರು. ಇವರನ್ನು ತಪಾಸಣೆಗೆ ಒಳಪಡಿಸಿದಾಗ ಹಲವರಿಗೆ ಕರೊನಾ ಪಾಸಿಟಿವ್ ಬಂದಿತ್ತು. ಹಾಗಾಗಿ ಎಲ್ಲರನ್ನೂ ದೆಹಲಿಯ ವಿವಿಧ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಇರಿಸಲಾಗಿತ್ತು.
ಇದರಲ್ಲಿ ಕೆಲವರು ತಮ್ಮನ್ನು ನೋಡಿಕೊಳ್ಳುತ್ತಿದ್ದ ವೈದ್ಯರ ಜತೆಗೇ ಅನುಚಿತ ವರ್ತನೆ ತೋರಿದ್ದರು. ಇನ್ನು ಕೆಲವರು, ಮಹಿಳಾ ನರ್ಸ್‌ಗಳ ಜತೆ ಅನುಚಿತವಾಗಿ ನಡೆದುಕೊಂಡಿದ್ದರು. ಇದು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಇದನ್ನೂ ಓದಿಸಾರಿಗೆ ಸಿಬ್ಬಂದಿ ಆತಂಕ ಪಡುವ ಅಗತ್ಯವಿಲ್ಲ; ಸಚಿವ ಲಕ್ಷ್ಮಣ್​ ಸವದಿ ಕೊಟ್ಟಿದ್ದಾರೊಂದು ಗುಡ್​ ನ್ಯೂಸ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
