ನವದೆಹಲಿ:ಲಾಕ್​ಡೌನ್​ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಆಟೋ, ಟ್ಯಾಕ್ಸಿ ಹಾಗೂ ಇ-ರಿಕ್ಷಾ ಸೇರಿದಂತೆ ಸಾರ್ವಜನಿಕ ವಾಹನದ ಚಾಲಕರ ನೆರವಿಗೆ ದೆಹಲಿ ಸರ್ಕಾರ ಧಾವಿಸಿದ್ದು, ಪ್ರತಿಯೊಬ್ಬರಿಗೂ ತಲಾ 5 ಸಾವಿರ ರೂ. ಆರ್ಥಿಕ ನೆರವು ನೀಡುವುದಾಗಿ ಸಿಎಂ ಅರವಿಂದ್​ ಕೇಜ್ರಿವಾಲ್​ ಘೋಷಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾರಿಗೆ ಚಾಲಕರ ಬ್ಯಾಂಕ್​ ಖಾತೆಗಳ ನಂಬರ್​ ದೊರೆಯದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಹೇಗೆ ಕಾರ್ಯರೂಪಕ್ಕೆ ತರಬೇಕೆಂದು ಸರ್ಕಾರ ಚಿಂತಿಸುತ್ತಿದೆ ಎಂದು ತಿಳಿಸಿದರು.
ದೆಹಲಿಯಲ್ಲಿ ಯಾರೊಬ್ಬರು ಕೂಡ ಹಸಿವಿನಿಂದ ಬಳಲುವುದಿಲ್ಲ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಮುಂದಿನ 7 ರಿಂದ 10 ದಿನಗಳಲ್ಲಿ ಸಾರ್ವಜನಿಕ ಸೇವಾ ಚಾಲಕರಿಗೆ ಆರ್ಥಿಕ ನೆರವನ್ನು ಖಂಡಿತವಾಗಿ ಒದಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಈಗಾಗಲೇ ಸುಮಾರು 35 ಸಾವಿರಕ್ಕೂ ಹೆಚ್ಚು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ದೆಹಲಿ ಸರ್ಕಾರ ತಲಾ 5 ಸಾವಿರ ರೂ. ಆರ್ಥಿಕ ನೆರವು ಒದಗಿಸಿದೆ.
ದೇಶಕ್ಕೆ ವಕ್ಕರಿಸಿರುವ ಮಹಾಮಾರಿ ಕರೊನಾ ವೈರಸ್​ ಸೋಂಕು ತಡೆಗಟ್ಟಲು ಇಡೀ ದೇಶಕ್ಕೆ ಲಾಕ್​ಡೌನ್​ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಆರ್ಥಿಕ ಚಟುವಟಿಕೆ ಸ್ತಬ್ಧವಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಅವರ ನೆರವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಧಾವಿಸಿದೆ.(ಏಜೆನ್ಸೀಸ್​)
ಕರೊನಾ ತಡಗೆ ಏಪ್ರಿಲ್ 5ರ ಸಂಕಲ್ಪ ಏನು- ವಿಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ ವಿವರಿಸಿದ್ದಾರೆ ನೋಡಿ…

ಸಿಂಗಾಪುರ್​ ವಿಮಾನ ನಿಲ್ದಾಣದಲ್ಲಿ ಕರೊನಾ ಎಂದು ಕೂಗಾಡಿದ ಭಾರತೀಯನ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
