ನವದೆಹಲಿ:ಕರೊನಾ ವೈರಸ್‌ ಕುರಿತಂತೆ ಸುದ್ದಿ ಮಾಡಲು ಹೋಗಿದ್ದ ಹಾಗೂ ಅವರ ಒಡನಾಟದಲ್ಲಿದ್ದ 53 ಪತ್ರಕರ್ತರಿಗೆ ದೆಹಲಿಯಲ್ಲಿ ಕೊರೊನಾ ಸೋಂಕು ನಿನ್ನೆ ದೃಢಪಟ್ಟಿರುವ ಹಿನ್ನೆಲೆಯಲ್ಲಿ, ಇಲ್ಲಿರುವ ಎಲ್ಲಾ ಮಾಧ್ಯಮದವರಿಗೆ ಕರೊನಾ ಪರೀಕ್ಷೆ ಮಾಡಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅನುಮತಿ ನೀಡಿದ್ದಾರೆ.ಇಷ್ಟೊಂದು ಬೃಹತ್‌ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿರುವುದಕ್ಕೆ ಪತ್ರಕರ್ತರು ತೀವ್ರ ಆತಂಕಕ್ಕೆ ಒಳಗಾಗಿದ್ದು, ಎಲ್ಲರಿಗೂ ಪರೀಕ್ಷೆ ಮಾಡಿಸಿಕೊಳ್ಳಲು ಅವಕಾಶ ನೀಡಬೇಕು ಎಂದು ಕೋರಿ ಅನುರಾಗ್‌ ಧಾಂಡಾ ಎನ್ನುವವರು ಟ್ವೀಟ್‌ ಮೂಲಕ ಮುಖ್ಯಮಂತ್ರಿಗಳನ್ನು ಕೋರಿದ್ದರು. ಅವರ ಟ್ವೀಟ್‌ಗೆ ಇಂದು ಪ್ರತಿಕ್ರಿಯಿಸಿರುವ ಕೇಜ್ರಿವಾಲ್‌, ನಾವು ಅದಕ್ಕೆ ಸಿದ್ಧತೆ ಮಾಡಿಕೊಡುವುದಾಗಿ ಹೇಳಿದ್ದಾರೆ.ಏಪ್ರಿಲ್‌ 16 ಮತ್ತು 17ರಂದು ನಗರದ ಆಜಾದ್‌ ಮೈದಾನದಲ್ಲಿ ನಡೆದಿದ್ದ ವಿಶೇಷ ಶಿಬಿರದಲ್ಲಿ ಪತ್ರಕರ್ತರಿಗೆ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಛಾಯಾಗ್ರಾಹಕರು, ವೀಡಿಯೋ ಜರ್ನಲಿಸ್ಟ್‌ಗಳು ಹಾಗೂ ವರದಿಗಾರರು ಸೇರಿ 171 ಪತ್ರಕರ್ತರ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿತ್ತು.ಆ ಪೈಕಿ 53 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಎಲ್ಲರನ್ನೂ ಐಸೊಲೇಷನ್‌ನಲ್ಲಿ ಇಡಲಾಗಿದೆ ಎಂದು ಬೃಹತ್‌ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ. ಈ ಸಂಖ್ಯೆ ಇನ್ನು ಏರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಒಂದೇ ಕಡೆಗಳಲ್ಲಿ ಇಷ್ಟು ಪ್ರಮಾಣದ ಪತ್ರಕರ್ತರಲ್ಲಿ ಸೋಂಕು ಕಾಣಿಸಿಕೊಂಡಿರುವುದು ಮಾಧ್ಯಮ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಆದ್ದರಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರತಿಯೊಬ್ಬರಿಗೂ ಪರೀಕ್ಷೆ ಮಾಡಿಸುವಂತೆ ಅನುರಾಗ್‌ ಕೋರಿದ್ದರು.ಈ ನಡುವೆ, ಪತ್ರಕರ್ತರ ಪ್ರಾಥಮಿಕ ಹಾಗೂ ಸೆಕೆಂಡರಿ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯಗಳು ಮುಂದುವರೆದಿವೆ ಎಂದು ಬಿಎಂಸಿ ವಕ್ತಾರ ವಿಜಯ್‌ ಕಬಾಳೆ ಹೇಳಿದ್ದಾರೆ.(ಏಜೆನ್ಸೀಸ್‌)
Sure. We will do thathttps://t.co/ehcY5OMiEP
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:18 + eighteen =
Remember me
