ನವದೆಹಲಿ:ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆಯ ಎರಡು ಪ್ರಕರಣಗಳಲ್ಲಿ ಬಂಧನದಲ್ಲಿರುವ ಬಿಆರ್​ಎಸ್​ ನಾಯಕಿ ಕೆ. ಕವಿತಾ ಅವರು ಸಲ್ಲಿಸಿದ್ದ ಎರಡು ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಮೇ 28 ರಂದು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ತೀರ್ಪನ್ನು ಕಾಯ್ದಿರಿಸಿದ್ದರು.
ಇದನ್ನೂ ಓದಿ:ಮೈಸೂರು ಮುಡಾದಲ್ಲಿ ಹಗರಣ ಆರೋಪ: ಸೈಟುಗಳ ಹಂಚಿಕೆ ರದ್ದು, ಅಧಿಕಾರಿಗಳ ತಲೆದಂಡ
ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣ ಮತ್ತು ಇಡಿ ವಿಚಾರಣೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನೀಡಲು ನಿರಾಕರಿಸಿದ್ದವ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕವಿತಾ ಅವರು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಕವಿತಾ ಜಾಮೀನು ಅರ್ಜಿಗೆ ಸಿಬಿಐ ಮತ್ತ ಇಡಿ ಆಕ್ಷೇಪ ವ್ಯಕ್ತಪಡಿಸಿದ್ದವು.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ 50 ಆರೋಪಿಗಳ ಕವಿತಾ ಒಬ್ಬರೇ ಮಹಿಳೆ. ಇದರಿಂದ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕು ಎಂದು ಕವಿತಾ ಪರ ವಕೀಲರು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್​ 15 ರಂದು ಜಾರಿ ನಿರ್ದೇಶನಾಲಯ ಬಿಆರ್​ಎಸ್ ನಾಯಕಿ ಕೆ.ಕವಿತಾ ಅವರನ್ನು ತಿಹಾರ್ ಜೈಲಿನಲ್ಲಿ ಬಂಧಿಸಿತ್ತು.
ರಾಹುಲ್ ಹಿಂದೂಗಳನ್ನು ಅವಮಾನಿಸಿಲ್ಲ: ಸಹೋದರನ ಬೆನ್ನಿಗೆ ನಿಂತ ಪ್ರಿಯಾಂಕಾ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × one =
Remember me
