ದೆಹಲಿ:ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ದೆಹಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕಮನೀಶ್ಸಿಸೋಡಿಯಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಇದನ್ನೂ ಓದಿ:ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವರ್ಗಾವಣೆಗೆಂದೇ ಇದೆ ಸಿಂಡಿಕೇಟ್: ಎಚ್​ಡಿಕೆ ಗಂಭೀರ ಆರೋಪ
ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾರವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಈ ಹಂತದಲ್ಲಿ ಸಿಸೋಡಿಯಾ ಜಾಮೀನು ಪಡೆಯಲು ಅರ್ಹರಲ್ಲ ಎಂದು ಹೇಳಿದರು. ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಹ ಆರೋಪಿಗಳಾದ ಉದ್ಯಮಿಗಳಾದ ಅಭಿಷೇಕ್ ಬೋನಪಲ್ಲಿ, ಬೆನೊಯ್ ಬಾಬು ಮತ್ತು ವಿಜಯ್ ನಾಯರ್​ರ ಜಾಮೀನು ಅರ್ಜಿಗಳನ್ನು ಸಹ ಹೈಕೋರ್ಟ್ ವಜಾಗೊಳಿಸಿದೆ.
ಇದನ್ನೂ ಓದಿ:ತೆಂಗಿನೆಣ್ಣೆಯನ್ನು ಹೀಗೆ ಬಳಸಿ.. ಹಳದಿ ಹಲ್ಲು ಸೇರಿದಂತೆ ಈ 5 ಸಮಸ್ಯೆಗಳಿಂದ ದೂರ ಇರಿ
ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಮನೀಶ್ ಸಿಸೋಡಿಯಾರ ಕಳೆದ ಫೆಬ್ರವರಿ 26ರಂದು ಮೊದಲ ಬಾರಿಗೆ ಸಿಬಿಐನಿಂದ ಬಂಧನಕ್ಕೊಳಗಾಗಿದ್ದರು. ಈ ಕುರಿತ ಸಿಬಿಐ ಪ್ರಕರಣದಲ್ಲಿ ಮೇ 30ರಂದು ಹೈಕೋರ್ಟ್ ಈಗಾಗಾಲೇ ಜಾಮೀನು ನಿರಾಕರಿಸಿದೆ. ಇಡಿ ದಾಖಲಿಸಿದ ಪ್ರಕರಣದಲ್ಲಿ ಸಿಸೋಡಿಯಾ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − thirteen =
Remember me
