ನವದೆಹಲಿ:ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಆಪ್ತ, ಸಂಸದ ರಾಹುಲ್​ ರಮೇಶ್​ ಶೆವಾಲೆ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ(UBT) ಮುಖ್ಯಸ್ಥ ಉದ್ಧವ್​ ಠಾಕ್ರೆ, ರಾಜ್ಯಸಭೆ ಸದಸ್ಯ ಸಂಜಯ್​ ರಾವುತ್​​ ಹಾಗೂ ಶಾಸಕ ಆದಿತ್ಯ ಠಾಕ್ರೆಗೆ ದೆಹಲಿ ಹೈಕೋರ್ಟ್​ ಸಮನ್ಸ್​ ಜಾರಿ ಮಾಡಿದೆ.
ಏಕನಾಥ್​ ಶಿಂಧೆ ನೇತೃತ್ವದ ಶಿವಸೇನೆ ಬಣವು ಪಕ್ಷದ ಚಿಹ್ನೆಯನ್ನ 2,000 ಸಾವಿರ ಕೋಟಿ ರೂಪಾಯಿಗೆ ಖರೀದಿಸಿದೆ ಎಂದು ಈ ಮೂವರು ನಾಯಕರು ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರಾಹುಲ್​ ಶೆವಾಲೆ ದೆಹಲಿ ಹೈಕೋರ್ಟಿನಲ್ಲಿ ಮಾನನಷ್ಟ ಮೊಕದ್ದಮೆಯನ್ನ ದಾಖಲಿಸಿದ್ದರು.
ಇದನ್ನೂ ಓದಿ: ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಶಂಕಿತನನ್ನು ಬೆಳಗಾವಿಯಿಂದ ಕರೆದೊಯ್ದ ನಾಗ್ಪುರ ಪೊಲೀಸರು
ಸಂಸದ ರಾಹುಲ್​ ಶೆವಾಲೆ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್​ ನಾಯ್ಯರ್ ತಮ್ಮ ಕಕ್ಷಿದಾರರ ವಿರುದ್ಧ​ ಯಾವುದೇ ಮಾನಹಾನಿಕಾರಕ ಹೇಳಿಕೆಗಳನ್ನ ನೀಡದಂತೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ವಿನಂತಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತೀಕ್​ ಜಲನ್​ ಅವರಿದ್ದ ಏಕಸದಸ್ಯ ಪೀಠವು ಪ್ರತಿವಾದಿಗಳು ಪ್ರತಿಕ್ರಿಯೆ ನೀಡಿದ ನಂತರವಷ್ಟೇ ಆದೇಶವನ್ನ ಹೊರಡಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನ ಎಪ್ರಿಲ್​ 17ಕ್ಕೆ ಮುಂದೂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
