ನವದೆಹಲಿ:ದೇಶದ್ರೋಹ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಆರೋಪಗಳನ್ನು ಒಳಗೊಂಡ 2020ರ ಕೋಮು ಗಲಭೆ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್‌ಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರಿದ್ದ ಪೀಠ ಶಾಸನಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ತನಗೆ ಶಾಸನಬದ್ಧ ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಶಾರ್ಜೀಲ್ ಪ್ರಶ್ನಿಸಿದ್ದರು. ಗರಿಷ್ಠ ಏಳು ವರ್ಷಗಳ ಶಿಕ್ಷೆಯ ಅರ್ಧದಷ್ಟು ಶಿಕ್ಷೆಯನ್ನು ಅನುಭವಿಸಿದ ಕಾರಣ ಇಮಾಮ್ ಜಾಮೀನು ಕೋರಿದ್ದರು. ಇಮಾಮ್ ಕೋರಿಕೆಯನ್ನು ನ್ಯಾಯಾಲಯವು ಅಂಗೀಕರಿಸಿದ್ದು, ಪ್ರಕರಣದಲ್ಲಿ ಏಳು ವರ್ಷಗಳ ಗರಿಷ್ಠ ಶಿಕ್ಷೆಯ ಅರ್ಧದಷ್ಟು ಶಿಕ್ಷೆಯನ್ನು ಅಪರಾಧಿಯು ಈಗಾಗಲೇ ಅನುಭವಿಸಿದ್ದಾನೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು ದೆಹಲಿ ಹೈಕೋರ್ಟ್ ಈ ಆದೇಶ ನೀಡಿದೆ.
ಪ್ರಾಸಿಕ್ಯೂಷನ್ ಪ್ರಕಾರ, ಶರ್ಜೀಲ್ ಇಮಾಮ್ ಅವರು  2019 ಡಿಸೆಂಬರ್ 13ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಮತ್ತು ಡಿಸೆಂಬರ್ 16, 2019 ರಂದು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದರು, ಅಲ್ಲಿ ಅವರು ಅಸ್ಸಾಂ ಮತ್ತು ಉಳಿದ ಈಶಾನ್ಯವನ್ನು ದೇಶದಿಂದ ಬೇರ್ಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಕತ್ತರಿಸುವುದಾಗಿ ಬೆದರಿಕೆ ಹಾಕಿದರು.
ದೇಶದ್ರೋಹದ ಅಪರಾಧಕ್ಕಾಗಿ ಇಮಾಮ್ ವಿರುದ್ಧದ ಪ್ರಕರಣವನ್ನು ಆರಂಭದಲ್ಲಿ ದೆಹಲಿ ಪೋಲೀಸ್ ವಿಶೇಷ ವಿಭಾಗವು ದಾಖಲಿಸಿತ್ತು, ನಂತರ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ) ಸೆಕ್ಷನ್ 13 ಅನ್ನು ಸೇರಿಸಲಾಗಿತ್ತು.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೆಹಲಿಯ ಜಾಮಿಯಾ ಪ್ರದೇಶ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ನೀಡಿದ ಆರೋಪದಲ್ಲಿ ಶಾರ್ಜೀಲ್ ಇಮಾಮ್ ಅವರನ್ನು ದೇಶದ್ರೋಹ ಮತ್ತು ಯುಎಪಿಎ ಪ್ರಕರಣಗಳಲ್ಲಿ ಬಂಧಿಸಲಾಗಿತ್ತು. 2020 ಜನವರಿ28 ರಿಂದ ಇಮಾಮ್ ಬಂಧನದಲ್ಲಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − three =
Remember me
