ದೆಹಲಿ:ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್​ಡಿಎ ಒಕ್ಕೂಟದ ವಿರುದ್ಧ ತೊಡೆ ತಟ್ಟಿರುವ 26 ವಿಪಕ್ಷಗಳು ತಮ್ಮ ಮಹಾಮೈತ್ರಿಯ ಹೆಸರನ್ನು I.N.D.I.A.ಎಂದು ಮರುನಾಮಕರಣ ಮಾಡಿದ್ದವು. ಇದೀಗ ಈ ಹೆಸರನ್ನು ಬಳಸಿದ್ದಕ್ಕಾಗಿ ದೆಹಲಿ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.ಇದನ್ನೂ ಓದಿ:ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್​ ಗಾಂಧಿಗೆ ಬಿಗ್ ರಿಲೀಫ್; ಶಿಕ್ಷೆಗೆ ‘ಸುಪ್ರೀಂ’ ತಡೆವಿರೋಧ ಪಕ್ಷಗಳು ತಮ್ಮ ಮೈತ್ರಿಗಾಗಿ I.N.D.I.A. ಎಂಬ ಸಂಕ್ಷಿಪ್ತ ರೂಪವನ್ನು ಬಳಸದಂತೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮಾಡಿದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಅಮಿತ್ ಮಹಾಜನ್ ನೇತೃತ್ವದ ವಿಭಾಗೀಯ ಪೀಠವು ಕೇಂದ್ರ ಸರ್ಕಾರ, ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು 26 ರಾಜಕೀಯ ಪಕ್ಷಗಳಿಂದ ನೋಟಿಸ್ ಜಾರಿ ಮಾಡಿದೆ.2024ರ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ “ರಾಜಕೀಯ ಪಕ್ಷಗಳು” ಅಥವಾ “ಮೈತ್ರಿಕೂಟಗಳು ಮತ್ತು ನಮ್ಮ ದೇಶ” ನಡುವೆ ಹೋರಾಡಲಾಗುವುದು ಎಂದು ಸಾಮಾನ್ಯ ಜನರ ಮನಸ್ಸಿನಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಇದಾಗಿದೆ. ಮುಂದಿನ ಲೋಕಸಭೆ ಚುನಾವಣೆಗೆ ನಮ್ಮ ದೇಶದ ಹೆಸರಿನಿಂದ ಅನಗತ್ಯ ಲಾಭ ಪಡೆಯಲು ಬಯಸುತ್ತವೆ ಎಂದು ಪಿಐಎಲ್​ನಲ್ಲಿ ಹೇಳಲಾಗಿದೆ. ಇದರ ಬಗ್ಗೆ ವಿಚಾರಣೆಯ ಅಗತ್ಯವಿದೆ ಎಂದು ಪೀಠವು ಹೇಳಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 2 =
Remember me
