ನವದೆಹಲಿ:ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆಯನ್ನು ತಡೆಹಿಡಿದ ದೆಹಲಿ ಪಟಿಯಾಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ದೆಹಲಿ ಹೈಕೋರ್ಟ್​ ಇಂದು ವಜಾಗೊಳಿಸಿದೆ.
ಈ ನಾಲ್ವರು ಅಪರಾಧಿಗಳನ್ನೂ ಒಟ್ಟಿಗೇ ಗಲ್ಲಿಗೇರಿಸಬೇಕು. ಬೇರೆಬೇರೆಯಾಗಿ ನೇಣಿಗೆ ಹಾಕುವಂತಿಲ್ಲ ಎಂದು ಸೂಚನೆ ನೀಡಿದ ಹೈಕೋರ್ಟ್ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟ್​ ಅವರು, ಅಪರಾಧಿಗಳು ಯಾವುದೇ ಕಾನೂನು ಪ್ರಕ್ರಿಯೆ ಕೈಗೊಳ್ಳುವುದಿದ್ದರೂ, ಅರ್ಜಿ ಸಲ್ಲಿಸುವುದಿದ್ದರೂ ಇನ್ನೊಂದು ವಾರದಲ್ಲಿ ಅದನ್ನೆಲ್ಲ ಪೂರ್ತಿಗೊಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳು ತಮಗೆ ವಿಧಿಸಲಾಗಿರುವ ಮರಣದಂಡನೆಯನ್ನು ವಿಳಂಬಗೊಳಿಸಿಕೊಳ್ಳಲು ಲೆಕ್ಕಾಚಾರ ಹಾಕಿದ್ದಾರೆ ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಹೈಕೋರ್ಟ್​ನಲ್ಲಿ ಹೇಳಿದ್ದರು.
ಆದರೆ ಹೈಕೋರ್ಟ್​, ಅಪರಾಧಿಗಳು ಮರಣದಂಡನೆ ವಿಳಂಬದ ತಂತ್ರ ಅನುಸರಿಸಿದ್ದಾರೆ ಎಂದು ವಾದಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದೆ. ನಾಲ್ವರು ಅಪರಾಧಿಗಳಿಗೆ ಸುಪ್ರೀಂಕೋರ್ಟ್​ 2017ರಲ್ಲಿಯೇ ಮರಣದಂಡನೆ ವಿಧಿಸಿದೆ. ಆದರೆ ಅದಾದ ಬಳಿಕ ಅವರಿಗೆ ಡೆತ್​ ವಾರಂಟ್​ ಜಾರಿ ಮಾಡುವಲ್ಲಿ ಯಾರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದೆ.
ಅಪರಾಧಿಗಳಾದ ಮುಕೇಶ್ ಕುಮಾರ್​ ಸಿಂಗ್​, ಪವನ್​ ಗುಪ್ತಾ, ವಿನಯ್​ ಕುಮಾರ್​ ಶರ್ಮಾ, ಅಕ್ಷಯ್​ ಕುಮಾರ್​ರನ್ನು ಫೆ.1ರಂದು ನೇಣಿಗೆ ಏರಿಸಬೇಕಿತ್ತು. ಆದರೆ ಈ ಮಧ್ಯೆ ಕೆಲವು ಕಾನೂನು ಪ್ರಕ್ರಿಯೆಗಳಿಂದಾಗಿ ದೆಹಲಿ ನ್ಯಾಯಾಲಯ ಅವರ ಮರಣದಂಡನೆಗೆ ತಡೆ ನೀಡಿತ್ತು. ಅದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದವು. ಫೆ.2ರಂದು ವಿಚಾರಣೆ ನಡೆಸಿದ ನ್ಯಾಯಾಧೀಶ ಸುರೇಶ್​ ಕುಮಾರ್ ಕೈಟ್​ ತೀರ್ಪು ಕಾಯ್ದಿರಿಸಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
