ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಲಾರಂಭಿಸಿದೆ. ಆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್​ಡೌನ್​ ನಿಯಮವನ್ನೂ ಸರ್ಕಾರ ಸಡಿಲಗೊಳಿಸಿ ಆದೇಶಿಸಿದೆ. ಸರಿ-ಬೆಸ ನಿಯಮದಲ್ಲಿ ಕೆಲ ಕೆಲಸ ಕಾಮಗಾರಿಗಳು ಹಾಗೂ ಅಂಗಡಿಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ.
ಖಾಸಗಿ ಕಚೇರಿಗಳಲ್ಲಿ ಶೇ. 50 ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ಇದೆ. ಎಲ್ಲ ರೀತಿಯ ಮಾರುಕಟ್ಟೆಗಳು ಹಾಗೂ ಅಂಗಡಿಗಳು ಸರಿ ಬೆಸ ನಿಯಮದಲ್ಲಿ ಬಾಗಿಲು ತೆರೆಯಬಹುದು. ಇ ಕಾಮರ್ಸ್​ ಮೂಲಕ ಹೋ ಡೆಲಿವರಿ ಮಾಡಬಹುದು. ಎಲ್ಲ ಅಂಗಡಿಗಳು ಬೆಳಗ್ಗೆ 10ರಿಂದ ರಾತ್ರಿ 8ರವರೆಗೂ ತೆರೆದಿಡಬಹುದು. ಮಾಲ್​ಗಳಿಗೂ ಇದೇ ನಿಯಮವಿರಲಿದೆ ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ. ಈ ಹಿಂದೆ ರಾಜ್ಯದಲ್ಲಿ ವಾಯುಮಾಲಿನ್ಯ ಹೆಚ್ಚಾದಾಗಲೂ ಇದೇ ರೀತಿ ಸರಿ ಬೆಸ ನಿಯಮ ಅನುಸರಿಸಲಾಗಿತ್ತು.
ಸಂಪೂರ್ಣವಾಗಿ ಸ್ಥಗಿತಗೊಂಡಿದ್ದ ಸಾರಿಗೆ ವ್ಯವಸ್ಥೆಗೂ ಸಡಿಲಿಕೆಯನ್ನು ನೀಡಲಾಗಿದೆ. ಮೆಟ್ರೋ ರೈಲುಗಳಲ್ಲಿ ಶೇ. 50 ಆಸನ ಭರ್ತಿ ಮಾಡಬಹುದು ಎಂದು ತಿಳಿಸಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಎ ವರ್ಗದ ನೌಕರರು ಎಲ್ಲ ದಿನ ಕೆಲಸ ಮಾಡಬಹುದು. ಅವರ ಕೆಳ ದರ್ಜೆಯವರು ಶೇ. 50 ಸಿಬ್ಬಂದಿಯಾಗಿ ಕೆಲಸ ಮಾಡಬೇಕು ಎಂದು ತಿಳಿಸಲಾಗಿದೆ. ಜಿಮ್​ಗಳು, ಸ್ವಿಮ್ಮಿಂಗ್​ ಪೂಲ್​ಗಳು, ವಾಟರ್​ ಪಾರ್ಕ್​, ಸೆಲಾನ್​, ಶೈಕ್ಷಣಿಕ ಸಂಸ್ಥೆ, ಸಿನಿಮಾ ಹಾಲ್​, ಥಿಯೇಟರ್​ಗಳನ್ನು ಸದ್ಯಕ್ಕೆ ತೆರಯುವಂತಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ತಿಳಿಸಿದ್ದಾರೆ. ಸೋಂಕು ಕಡಿಮೆಯಾದಂತೆ ಹಂತ ಹಂತವಾಗಿ ಲಾಕ್​ಡೌನ್​ ಸಡಿಲಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ. (ಏಜೆನ್ಸೀಸ್)
ಆಪರೇಷನ್​ ಮಾಡಿ ಮಗು ತೆಗೆಯುವ ವೇಳೆ ಹತ್ತಿಯನ್ನು ಹೊಟ್ಟೆಯಲ್ಲೇ ಬಿಟ್ಟ ವೈದ್ಯರು! ಮೇಲೆ ಏಳಲೇ ಇಲ್ಲ ತಾಯಿ

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 3 =
Remember me
