ನವದೆಹಲಿ:ನಗರ ಸಾರಿಗೆ ಬಸ್​ನಲ್ಲಿ ಯುವತಿಯೊಬ್ಬಳ ಮುಂದೆ ಕಾಮುಕನೊಬ್ಬ ಹಸ್ತಮೈಥುನ ಮಾಡುವ ಮೂಲಕ ತೀರಾ ಅಸಹ್ಯವಾಗಿ ವರ್ತಿಸಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ರೋಹಿಣಿ ಏರಿಯಾದಲ್ಲಿ ನಡೆದಿದೆ.
ದೆಹಲಿಯ ನಗರ ಸಾರಿಗೆ ಡಿಟಿಸಿ ಬಸ್​ನಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಯುವತಿ ಅಳುತ್ತಾ ಕೂಗಿಕೊಂಡಿದ್ದನ್ನು ಕೇಳಿ, ಅಲ್ಲಿಯೇ ಇದ್ದ ಮಾರ್ಷಲ್​ ಆರೋಪಿಯನ್ನು ಹಿಡಿದುಕೊಂಡು ಆರೋಪಿಗೆ ಥಳಿಸಿದ್ದಾರೆ. ಆದರೆ, ಯಾವುದೇ ದೂರು ದಾಖಲಾಗದಿರುವ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ಬಿಹಾರದ ನಿವಾಸಿ ಎಂದು ತಿಳಿದುಬಂದಿದೆ. ಬುಧವಾರ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ನಾರ್ಥ್​ ರೋಹಿಣಿ ಪೊಲೀಸ್​ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಸುಮನ್ ನೇತೃತ್ವದಲ್ಲಿ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಹೇಳಿಕೆಯನ್ನು ದಾಖಲಿಸಲು ಅಥವಾ ಈ ಸಂಬಂಧ ಯಾವುದೇ ದೂರು ನೀಡಲು ಸಂತ್ರಸ್ತೆಯನ್ನು ಸಂಪರ್ಕಿಸಿದರೂ ಆಕೆ ಪ್ರತಿಕ್ರಿಯಿಸಲು ನಿರಾಕರಿಸಿದಳು ಎಂದು ಪೊಲೀಸರು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ಬಂದರೆ, ಕಾನೂನಿನ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ನರೇಶ್​ಗೆ ಪೋರ್ನ್​ ವಿಡಿಯೋಗಳನ್ನು ನೋಡುವ ಚಟವಿದೆ: ಗಂಡನ ಮುಖವಾಡ ಕಳಚಿದ 3ನೇ ಪತ್ನಿ ರಮ್ಯಾ

ಕರೆದರೂ ಬಾರದ ವರ ಡಾನ್ಸ್​ನಲ್ಲಿ ಮಗ್ನ! ಸ್ನೇಹಿತನ ಜತೆ ಮದ್ವೆಯಾಗಿ ವರನಿಗೆ ಶಾಕ್​ ಕೊಟ್ಟ ವಧು

ಹಾವೇರಿಯಲ್ಲಿ ಅಕ್ಷರ ಜಾತ್ರೆ: ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭ, ವಿವಿಧ ಜಾನಪದ ಕಲಾ ತಂಡಗಳ ಮೆರಗು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + seven =
Remember me
