ಬೆಂಗಳೂರು:ಸದಾ ಹೊಡೆದಾಟ, ರೀಲ್ಸ್​, ಪ್ರಯಾಣಿಕರ ಅಸಭ್ಯ ವರ್ತನೆ ಸೇರಿದಂತೆ ಅನೇಕ ವಿಚಾರಗಳಿಗೆ ರಾಷ್ಟ್ರದ ಗಮನ ಸೆಳೆಯುತ್ತಿದ್ದ ದೆಹಲಿ ಮೆಟ್ರೋ ಇತ್ತೀಚಿನ ದಿನಗಳಲ್ಲಿ ಅಷ್ಟಾಗಿ ಸೌಂಡ್​ ಮಾಡುತ್ತಿಲ್ಲ. ಆದರೆ, ದೆಹಲಿ ಮೆಟ್ರೋಗೆ ಕಾಂಪಿಟೇಷನ್​ ಕೊಡುವಂತಹ ಘಟನೆ ಬೆಂಗಳೂರಿನ ಜೀವನಾಡಿ ಎಂದೇ ಹೆಸರುವಾಸಿಯಾಗಿರುವ ನಮ್ಮ ಮೆಟ್ರೋದಲ್ಲಿ ನಡೆದಿದ್ದು, ಇದು ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ವಿಡಿಯೋ ಸಖತ್​ ವೈರಲ್​ ಆಗಿದೆ.
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಜನನಿಬಿಡ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರಿಬ್ಬರು ಕಿತ್ತಾಡುತ್ತಿರುವುದನ್ನು ನೋಡಬಹುದಾಗಿದೆ. ಇಬ್ಬರು ಅವಾಚ್ಯ ಶಬ್ದಗಳಿಂದ ಒಬ್ಬರನ್ನೊಬ್ಬರು ನಿಂದಿಸುತ್ತಿದ್ದು, ಸಹ ಪ್ರಯಾಣಿಕರು ಜಗಳವನ್ನು ಬಿಡಿಸುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
A fight broke out between two passengers inside an overcrowded Metro train in Bengaluru.BMRCL is reviewing the video & investigating further details@OfficialBMRCLpic.twitter.com/x7uwMVqAfs
ಇದನ್ನೂ ಓದಿ:ಚಾಂಪಿಯನ್ಸ್​ ಟ್ರೋಫಿಯನ್ನು ಭಾರತ ಬಹಿಷ್ಕರಿಸಿದರೆ ಯಾವ ತಂಡಕ್ಕೆ ಒಲಿಯಲಿದೆ ಲಕ್​; ಹೀಗಿದೆ ಲೆಕ್ಕಾಚಾರ
ಕ್ರಿಸ್ಟಿನ್​ ಮ್ಯಾಥ್ಯೂ ಫಿಲಿಪ್​ ಎಂಬುವವರು ಈ ವಿಡಿಯೋವನ್ನು ಹಂಚಿಕೊಂಡಿದ್ದು, ಈವರೆಗೂ 5.5 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಗೆ ಒಳಪಟ್ಟಿದೆ. ಇತ್ತ ವಿಡಿಯೋ ನೋಡಿದ ಜನರು ದೆಹಲಿ ಮೆಟ್ರೋದ ಗಾಳಿ ಏನಾದರೂ ಬೆಂಗಳೂರಿಗೆ ಜೋರಾಗಿ ಬೀಸಿತ್ತಾ ಎಂದು ಪ್ರಶ್ನಿಸಿ ಕಮೆಂಟ್​ ಮಾಡಿದ್ದಾರೆ. ದೆಹಲಿ ಮೆಟ್ರೋದಲ್ಲಿ ಈ ರೀತಿಯ ಘಟನೆಗಳು ಸಾಮಾನ್ಯವಾಗಿದ್ದು, ಬೆಂಗಳೂರು ಮೆಟ್ರೋದಲ್ಲಿ ನಡೆದಿರುವುದನ್ನು ಕಂಡು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಪ್ರಯಾಣಿಕರಿಬ್ಬರ ಹೊಡೆದಾಟದ ವಿಡಿಯೋ ವೈರಲ್​ ಆಗುತ್ತಿದ್ದಂತೆ BMRCL ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ. ಯಾವ ಕಾರಣಕ್ಕಾಗಿ ಪ್ರಯಾಣಿಕರ ನಡುವೆ ಗಲಾಟೆಯಾಯಿತು ಎಂಬುದು ಮುಂದಿನ ದಿನಗಳಲ್ಲಿ ತಿಳಿದು ಬರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 4 =
Remember me
