ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಬಿಕ್ಕಟ್ಟಿನ ಹಿನ್ನೆಲೆ ಕಳೆದ ಆರು ದಿನಗಳಿಂದ ದೆಹಲಿ ಜಲ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಕೈಗೊಂಡಿದ್ದರು. ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರು ಸೇರಿದಂತೆ ಹಲವರು ಈ ಮುಷ್ಕರ ಇಲ್ಲಿಗೆ ನಿಲ್ಲಿಸಿ ಎಂದು ಮನವಿ ಮಾಡಿಕೊಂಡರು ಸಹ ತಲೆಕೆಡಿಸಿಕೊಳ್ಳದೆ, ಮುಂದುವರೆಸಿಕೊಂಡು ಹೋದ ಅತಿಶಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ರಕ್ತದೊತ್ತಡ ಮತ್ತು ಸಕ್ಕರೆ ಮಟ್ಟ ಮತ್ತಷ್ಟು ಕುಸಿದಿತ್ತು. ಆದ್ರೆ, ಅದನ್ನು ಮೀರಿ ಪ್ರತಿಭಟನೆಗೆ ಕುಳಿತ ಸಚಿವೆ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ:ಐವತ್ತು ಅಥವಾ ಶತಕ ಗಳಿಸುವುದಲ್ಲ ಮುಖ್ಯ… ರೋಹಿತ್ ಶರ್ಮಾ ಮಾತಿಗೆ ತುಟಿಬಿಚ್ಚದ ಹರ್ಷ ಭೋಗ್ಲೆ
ಆರೋಗ್ಯದಲ್ಲಿ ಏರುಪೇರಾಗಿದೆ. ನೀವು ತಕ್ಷಣವೇ ಈ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವುದು ಉತ್ತಮ ಎಂದು ವೈದ್ಯರು ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದರು. ಆದರೆ, ಜನರಿಗೆ ಸೀರು ಸಿಗುವವರೆಗೂ ನಾನು ಉಪವಾಸ ಅಂತ್ಯಗೊಳಿಸುವ ಮಾತೇ ಇಲ್ಲ ಎಂದು ಕುಳಿತ್ತಿದ್ದ ಅತಿಶಿ ಅವರ ಆರೋಗ್ಯ ತೀವ್ರ ಹದಗೆಟ್ಟ ಕಾರಣ ಇಂದು (ಜೂ.25) ಮುಂಜಾನೆ ಅವರನ್ನು ದಹೆಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮಾಹಿತಿ ಹಂಚಿಕೊಂಡಿದೆ.
ಕುಡಿಯುವ ನೀರಿನ ಪೂರೈಕೆಗಾಗಿ ದೆಹಲಿಯು ಉತ್ತರ ಪ್ರದೇಶ ಮತ್ತು ಹರಿಯಾಣವನ್ನು ಅವಲಂಬಿಸುವಂತಾಗಿದೆ. ನಮ್ಮ ಜನಕ್ಕೆ ನೀರಿನ ಪೂರೈಕೆ ಮಾಡಿಕೊಡಿ ಎಂದು ಆಗ್ರಹಿಸಿ, ಶುಕ್ರವಾರ (ಜೂ.21) ದಕ್ಷಿಣ ದೆಹಲಿಯ ಭೋಗಲ್‌ನಲ್ಲಿ ಅತಿಶಿ ಅನಿರ್ದಿಷ್ಟ ಮುಷ್ಕರ ಕೈಗೊಂಡಿದ್ದರು. ಆದರೆ, ಇದೀಗ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ, ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗಿದೆ,(ಏಜೆನ್ಸೀಸ್).
ಭಾರತದ ಹೆಡ್​ ಕೋಚ್​ ಆಗುವುದಾದರೆ… ಗೌತಮ್ ಗಂಭೀರ್​ ಮುಂದಿಟ್ಟ 5 ಬೇಡಿಕೆಗಳಿಗೆ ದಂಗಾದ ಬಿಸಿಸಿಐ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − sixteen =
Remember me
