ನವದೆಹಲಿ:ರಾಷ್ಟ್ರ ರಾಜಕಾರಣದ ಮಹತ್ವದ ಬೆಳವಣಿಗೆ ಒಂದರಲ್ಲಿ ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ರಾಜ್​ಕುಮಾರ್​ ಆನಂದ್​ ಎಎಪಿಗೆ ರಾಜೀನಾಮೆ ನೀಡಿದ್ದಾರೆ.
ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಖಾತೆಗಳನ್ನು ಹೊಂದಿರುವ ರಾಜ್​ಕುಮಾರ್​ ಆನಂದ್, ಆಮ್​ ಆದ್ಮಿ ಪಕ್ಷದಲ್ಲಿ ದಲಿತರಿಗೆ ಸೂಕ್ತ ಪ್ರಾತಿನಿಧ್ಯ ಸಿಗದ ಕಾರಣ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ರಾಜ್​ಕುಮಾರ್​ ಪಟೇಲ್​ ಪಟೇಲ್​ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
#WATCH| Delhi Social Welfare Minister Raaj Kumar Anand resigns from his post as minister and also from Aam Aadmi Partypic.twitter.com/QF52GyjhiW
ಇದನ್ನೂ ಓದಿ:ಏಕಾಏಕಿ ಬಾಲಕನ ಮೇಲೆ ಪಿಟ್​ಬುಲ್​ ದಾಳಿ; ಆದರೆ ಆತನನ್ನು ರಕ್ಷಿಸಿದ್ದು ಮಾತ್ರ…
ಎಎಪಿಯಲ್ಲಿ ದಲಿತ ಶಾಸಕರು, ಕೌನ್ಸಿಲರ್‌ಗಳಿಗೆ ಯಾವುದೇ ರೀತಿಯ ಗೌರವ ಸಿಗುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಬಲವಾದ ಸಂದೇಶವನ್ನು ನೋಡಿದ ನಂತರ ನಾನು ಎಎಪಿಗೆ ಸೇರಿದೆ. ಇಂದು ಪಕ್ಷವು ಭ್ರಷ್ಟಚಾರದಲ್ಲಿ ತೊಡಗಿದೆ. ಅದಕ್ಕಾಗಿಯೇ ನಾನು ಪಕ್ಷವನ್ನು ತ್ಯಜಿಸಲು ನಿರ್ಧರಿಸಿದ್ಧೇನೆ ಎಂದು ತಿಳಿಸಿದ್ದಾರೆ.
ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿಯ ಹಿರಿಯ ನಾಯಕರಾದ ಅರವಿಂದ್​ ಕೇಜ್ರಿವಾಲ್​, ಮನೀಶ್​ ಸಿಸೋಡಿಯಾ ಸೇರಿದಂತೆ ಅನೇಕರು ಜೈಲು ಸೇರಿದ್ದು, ಈ ನಡುವೆ ಸಚಿವ ಸ್ಥಾನ ಹಾಗೂ ಪಕ್ಷಕ್ಕೆ ರಾಜ್​ಕುಮಾರ್​ ಆನಂದ್​ ಅವರ ರಾಜೀನಾಮೆ ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ.
#WATCH| On his resignation from the post of Delhi Social Welfare Minister and Aam Aadmi Party, Raaj Kumar Anand says, "…I became a minister to pay back the society. I don't want to be part of a party that takes a backseat when Dalit representation is talked about. I am not…pic.twitter.com/rcTs58lAIe
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 1 =
Remember me
