ನವದೆಹಲಿ:ಅಬಕಾರಿ ನೀತಿಯಲ್ಲಿನ ಜಾರಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಬಂಧನ ಖಂಡಿಸಿ ಆಮ್​ ಆದ್ಮಿ ಪಕ್ಷ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್​ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾನೂನುಬಾಹಿರವಾಗಿ ಕೇಜ್ರಿವಾಲ್​ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಆರೋಪಿಸಿ ಸಚಿವರಾದ ಅತಿಶಿ ಚೌಧರಿ ಹಾಗೂ ಸೌರಭ್ ಭಾರದ್ವಾಜ್​ ಬೃಹತ್​ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಭದ್ರತೆಯ ದೃಷ್ಠಿಯಿಂದ ಪೊಲೀಸರು ಎಎಪಿ ಕೇಂದ್ರ ಕಚೇರಿಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಮುಚ್ಚಿದ್ದರು.
ಕೇಜ್ರಿವಾಲ್​ ಬಂಧನ ಖಂಡಿಸಿ ಪ್ರತಿಭಟನಾ ನಿರತರು ಸಚಿವರು ಹಾಗೂ ಮುಖಂಡರು ಬಿಜೆಪಿ ಕೇಂದ್ರ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಸೇರಿದಂತೆ ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.
VIDEO | Several AAP workers, including minister Saurabh Bharadwaj (@Saurabh_MLAgk), detained during their protest at ITO against Delhi CM Arvind Kejriwal's arrest.(Full video available on PTI Videos –https://t.co/n147TvqRQz)pic.twitter.com/4ksbkhpH2N

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 18 =
Remember me
