ನವದೆಹಲಿ:ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ರಾಜ್ಯ ಸಂಪುಟದಲ್ಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇಬ್ಬರ ರಾಜೀನಾಮೆಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ.
ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಬೆನ್ನಲ್ಲೇ ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಿದ್ದಾರೆ.
Delhi ministers Manish Sisodia and Satyendar Jain resign from their posts in the state cabinet; CM Arvind Kejriwal accepts their resignation.pic.twitter.com/rODxWkSoc9— ANI (@ANI)February 28, 2023
Delhi ministers Manish Sisodia and Satyendar Jain resign from their posts in the state cabinet; CM Arvind Kejriwal accepts their resignation.pic.twitter.com/rODxWkSoc9
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭಾಗಿಯಾದ ಆರೋಪದಲ್ಲಿ ಕಳೆದ ಭಾನುವಾರ ಬಂಧಿತರಾಗಿರುವ ಮನೀಶ್ ಸಿಸೋಡಿಯಾ ಅವರನ್ನು ಸ್ಥಳೀಯ ನ್ಯಾಯಾಲಯ ಮಾರ್ಚ್ 4 ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಿದೆ. ದೇಹಲಿಯ ರೋಸ್ ಅವೆನ್ಯೂ ಕೋರ್ಟ್​ನ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗಪಾಲ್, ಸಿಬಿಐ ಸಲ್ಲಿಸಿದ್ದ ಮನವಿಗೆ ಸಮ್ಮತಿಸಿ ಐದು ದಿನ ಕಸ್ಟಡಿಗೆ ಒಪ್ಪಿಸಲು ಆದೇಶಿಸಿದ್ದರು. ಸಿಸೋಡಿಯಾಗೆ ಜಾಮೀನು ನೀಡಬೇಕು ಎಂದು ಅವರ ವಕೀಲರು ಕೋರಿದ್ದರು.
ಸಿಬಿಐನ ಹೆಚ್ಚಿನ ಅಧಿಕಾರಿಗಳು ಸಿಸೋಡಿಯಾ ಬಂಧನವನ್ನು ವಿರೋಧಿಸಿದ್ದಾರೆ. ಸಿಸೋಡಿಯಾ ವಿರುದ್ಧ ಯಾವುದೇ ಪುರಾವೆಗಳಿಲ್ಲದಿದ್ದರೂ ಅವರನ್ನು ಬಂಧಿಸಲು ರಾಜಕೀಯ ಒತ್ತಡ ಹೆಚ್ಚಿದ್ದು, ಅಧಿಕಾರಿಗಳು ಅದನ್ನು ಪಾಲಿಸಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.(ಏಜೆನ್ಸೀಸ್)
ಇದನ್ನೂ ಓದಿ:ಬನವಾಸಿಯಲ್ಲಿ ಸಿಎಂ ಸಾಗುವ ದಾರಿಯುದ್ದಕ್ಕೂ ಕಂಡು ಬಂತು ‘ಪೇ ಸಿಎಂ’ ಪೋಸ್ಟರ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + twelve =
Remember me
